fbpx
ಸಮಾಚಾರ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಉಮೇಶ್ ಹೆಗ್ಡೆ ನಿಧನ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಉಮೇಶ್ ಹೆಗ್ಡೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 71 ವರ್ಷದ ವಯಸ್ಸಿನ ಉಮೇಶ್ ಅವರಿಗೆ ಇಂದು (ಅಕ್ಟೋಬರ್ 11) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಉಮೇಶ್ ಹೆಗ್ಡೆಯವರಿಗೆ ನಿನ್ನೆ (ಅಕ್ಟೋಬರ್ 10) ಹೃದಯವಾಗಿತ್ತು ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಅವರು ಪಾರ್ಥೀವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದೆ. ಅಂತಿಮ ದರ್ಶನ ಪಡೆದ ನಂತರ ಕುಟುಂಬಸ್ಥರು ಸಂಪ್ರದಾಯದ ಪ್ರಕಾರ ವಿಧಿವಿಧಾನಗಳನ್ನು ನಿರವೇರಿಸಲಿದ್ದಾರೆ.

ನೂರಾರು ಧಾರಾವಾಹಿಗಳು, ಹತ್ತಾರೂ ಸಿನಿಮಾಗಳಲ್ಲಿ ನಟಿಸಿರುವ ಉಮೇಶ್ ಅವರು ಕನ್ನಡ ಮನರಂಜನಾ ಉದ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದರು ಗುರುತಿಸಿಕೊಂಡಿದ್ದರು. ಅವರು ಬೆಳ್ಳಿತೆರೆ ಮತ್ತು ಕಿರುತೆರೆಯ ಮೇಲೆ ನಟಿಸಿದರು. ಹಿರಿಯ ನಟ ತಮ್ಮ ನಟನಾ ವೃತ್ತಿಜೀವನದ ಆರಂಭದ ದಿನಗಳಲ್ಲಿ ರಂಗಭೂಮಿ ಕಲಾವಿದರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top