fbpx
ಸಮಾಚಾರ

ಈ ನಟಿಯ ವಿರುದ್ಧ 50 ಕೋಟಿ ರೂ. ಮಾನಹಾನಿ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ತೊಡಗಿಕೊಂಡಿರುವ ಆರೋಪದಡಿ ಉದ್ಯಮಿ ರಾಜ್ ಕುಂದ್ರಾ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ವಿಷಯ ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ಈಗ ಇದೇ ಸೆಲೆಬ್ರಿಟಿ ದಂಪತಿ ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ದಂಪತಿ ಮತ್ತೊಮ್ಮೆ ಇದೇ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ ವಕೀಲರು ಶೆರ್ಲಿನ್ ಚೋಪ್ರಾ ವಿರುದ್ಧ 50 ಕೋಟಿ ರೂಪಾಯಿಗಳ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.

ನೀಲಿ ಚಿತ್ರ ದಂಧೆಯಲ್ಲಿ ಶೆರ್ಲಿನ್​ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ತಮ್ಮನ್ನು ರಾಜ್​ ಕುಂದ್ರಾ ಅವರು ಮೋಸದಿಂದ ಅಶ್ಲೀಲ ಸಿನಿಮಾ ದಂಧೆಗೆ ಎಳೆದುತಂದರು ಎಂದು ಶೆರ್ಲಿನ್​ ಚೋಪ್ರಾ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ಜೊತೆಗೆ ಅವರು ಶಿಲ್ಪಾ ಶೆಟ್ಟಿಯನ್ನೂ ಕುಟುಕುತ್ತಿದ್ದಾರೆ. ಈ ಎಲ್ಲಾ ಕಾರಣಕ್ಕೆ ಸ್ಟಾರ್​ ದಂಪತಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ತಮ್ಮ ವಕೀಲ ಪ್ರಶಾಂತ್ ಪಾಟೀಲ್ ಮೂಲಕ ಕಳುಹಿಸಿದ ಲೀಗಲ್ ನೋಟಿಸ್ ನಲ್ಲಿ, ಚೋಪ್ರಾ ಅವರು ಏಳು ದಿನಗಳ ಒಳಗೆ ಪ್ರಮುಖ ಪತ್ರಿಕೆಗಳಲ್ಲಿ ಮತ್ತು ಡಿಜಿಟಲ್ ಮಾಧ್ಯಮ ವೇದಿಕೆಗಳಲ್ಲಿ ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಕೋರಲಾಗಿದೆ. ಕ್ಷಮೆ ಕೇಳದಿದ್ದರೆ 37 ವರ್ಷದ ನಟಿಯ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದೆ. ಶೆರ್ಲಿನ್‌ ಚೋಪ್ರಾ ಹಣ ವಸೂಲಿ ಮಾಡುವ ಉದ್ದೇಶದಿಂದ ಆರೋಪ ಮಾಡಿದ್ದು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕ್ಷಮೆ ಕೇಳದಿದ್ದರೆ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶಿಲ್ಪಾ ಶೆಟ್ಟಿ ದಂಪತಿ ಎಚ್ಚರಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top