fbpx
ಸಮಾಚಾರ

ಅಣ್ಣನ ಮಗ ವಿನಯ್​ರಿಂದ ಪುನೀತ್​ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನ

ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ಪುನೀತ್‌ ಅಣ್ಣ ರಾಘವೇಂದ್ರ ರಾಜ್ ಕುಮಾರ್‌ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸುತ್ತಿದ್ದಾರೆ.

ಪುನೀತ್‌ ರಾಜ್ ಕುಮಾರ್‌ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳಿರುವುದರಿಂದ ಪುನೀತ್‌ ಅಣ್ಣ ರಾಘವೇಂದ್ರ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ನಿರ್ಧರಿಸಲಾಗಿದೆ. ಇಂದು ಸಂಜೆ ಸಕಲ ಸರ್ಕಾರೀ ಗೌರವಗಳೊಂದಿಗೆ ಪುನೀತ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಾ. ರಾಜ್ ಕುಮಾರ್​ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುಣಿ ತೋಡುವ ಕೆಲಸ ಆರಂಭ
ಆರು ಮಂದಿಯಿಂದ ಗುಣಿ ತೋಡುವ ಕೆಲಸ ಆರಂಭವಾಗಿದೆ. ಈಗಾಗಲೇ ಕಂಠೀರವ ಸ್ಟೂಡಿಯೋದಲ್ಲಿ ತಯಾರಿ ನಡೆಯುತ್ತಿದೆ. ಆಸನಗಳ ವ್ಯವಸ್ಥೆ ಸೇರಿದಂತೆ ಬ್ಯಾರಿಕೇಡ್ ನಿರ್ಮಾಣ‌ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಐನೂರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top