fbpx
ಸಮಾಚಾರ

ಬ್ರೇಕಿಂಗ್: ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್‌ನ ಕೇರ್‌ ಆಸ್ಪತ್ರೆಗೆ ಬಾಲಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಅವರಿಗೆ ಭುಜದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಲ ಭುಜದ ಮಾಂಸಖಂಡಗಳಲ್ಲಿ ಸಮಸ್ಯೆ ಇರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಬಾಲಕೃಷ್ಣ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಆರು ತಿಂಗಳುಗಳಿಂದಲೂ ನಂದಮೂರಿ ಬಾಲಕೃಷ್ಣ ಅವರಿಗೆ ಭುಜ ನೋವು ಕಾಡುತ್ತಿದೆ. ಭುಜ ನೋವು ಉಲ್ಬಣಗೊಂಡಿದ್ದರಿಂದ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭುಜದಲ್ಲಿ ಸಮಸ್ಯೆಯಿದ್ದ ಕಾರಣ ನಂದಮೂರಿ ಬಾಲಕೃಷ್ಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಡಾ.ರಘುವೀರ್ ರೆಡ್ಡಿ ಮತ್ತು ಡಾ.ಬಿ.ಎನ್‌.ಪ್ರಸಾದ್ ಅವರ ನೇತೃತ್ವದ ವೈದ್ಯರ ತಂಡ ನಂದಮೂರಿ ಬಾಲಕೃಷ್ಣ ಅವರಿಗೆ 4 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಿದೆ.ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಂದಮೂರಿ ಬಾಲಕೃಷ್ಣ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯದಲ್ಲೇ ನಂದಿಮೂರಿ ಬಾಲಕೃಷ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಸದ್ಯ ಬಾಲಕೃಷ್ಣ ಅಭಿನಯದ ಅಖಂಡ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಖ್ಯಾತ ನಿರ್ದೇಶಕ ಬಾಯಿಪಾಟು ಸೀನು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ರವೀಂದ್ರ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ. ಪ್ರಜ್ಞ್ಯಾ ಜೈಸ್ವಾಲ್ ನಾಯಕಿಯಾದರೆ, ಶ್ರೀಕಾಂತ್‌ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top