fbpx
ಸಮಾಚಾರ

ತಮ್ಮ ಪುನೀತ್ ನೆನಪಲ್ಲಿ ಖುದ್ದು ರಕ್ತದಾನ ಮಾಡಿ ಮಾದರಿಯಾದ ಶಿವಣ್ಣ

ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 12 ದಿನ. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಇಂದು ಅಭಿಮಾನಿಗಳಿಗೆ ಹಾಗೂ ಗಣ್ಯರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಈ ನಡುವೆ ನಟ ಶಿವರಾಜ್ ಕುಮಾರ್ ಅವರು ರಕ್ತದಾನ ಮಾಡಿ ಮಾದರಿಯಾಗಿದ್ದಾರೆ.

ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಟ ಶಿವರಾಜ್​ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ. ಆ ಬಳಿಕ ಶಿವಣ್ಣ ರಕ್ತದಾನ ಮಾಡಿದ್ದಾರೆ.

ಹೌದು. ಅರಮನೆ ಮೈದಾನದಲ್ಲಿ ಶಿವಣ್ಣ ರಕ್ತದಾನ ಮಾಡಿದ್ದಾರೆ. ಬೆಳಗ್ಗಿಂದ ಇದುವರೆಗೆ ನೂರಾರು ಮಂದಿ ರಕ್ತದಾನ ಮಾಡಿದ್ದು ಅನೇಕರು ನೇತ್ರದಾನಕ್ಕೆ ಸಹಿ ಮಾಡಿದ್ದಾರೆ. ರಕ್ತದಾನದ ವೀಕ್ಷಣೆ ಮಾಡುತ್ತಿದ್ದ ಶಿವಣ್ಣ ನಂತರ ತಾವೂ ರಕ್ತ ನೀಡಿ ಇತರರಿಗೆ ಮಾದರಿಯಾದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top