fbpx
ಸಮಾಚಾರ

‘ಪುನೀತ್​ ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ’; ಟೀಕಾಕಾರರಿಗೆ ರಾಧಿಕಾ ಪಂಡಿತ್​ ತಿರುಗೇಟು

ನಟ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಎರಡು ವಾರಗಳು ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಎಳ್ಳಷ್ಟೂ ಕಡಿಮೆಯಾಗಿಲ್ಲ. ಪುನೀತ್ ಅಕಾಲಿಕ ನಿಧನಕ್ಕೆ ಕರ್ನಾಟಕ ಮಾತ್ರವಲ್ಲ ದೇಶದ ಇತರ ರಾಜ್ಯಗಳು ಮತ್ತು ವಿಶ್ವದ ಇತರ ದೇಶಗಳಿಂದಲೂ ವಿಷಾದ ವ್ಯಕ್ತವಾಗುತ್ತಿದೆ.. ಅಪ್ಪು ಅಂತಿಮ ದರ್ಶನ ಪಡೆಯಲು ಸಾಧ್ಯವಾಗದ ಪರ ಭಾಷಾ ನಟರು ಕೂಡ ಅಪ್ಪು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.

ಈ ಮದ್ಯೆ ನಟಿ ರಾಧಿಕಾ ಪಂಡಿತ್ ಅವರು ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆದಿಲ್ಲ, ಸಂತಾಪ ಸೂಚಿಸಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದೀಗ ಈ ಎಲ್ಲಾ ವಿಚಾರಗಳ ಬಗ್ಗೆ ಸ್ವತಃ ರಾಧಿಕಾ ಪಂಡಿತ್ ಅವರೇ ಸ್ಪಷ್ಟನೆ ನೀಡಿದ್ದು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

 

 

ಇಂದು ರಾಧಿಕಾ ಪಂಡಿತ್ ಪುನೀತ್ ಕುರಿತು ಪೋಸ್ಟ್ ಹಾಕಿಕೊಂಡಿದ್ದು, ಅದರಲ್ಲಿ ‘ನೀವು ಇನ್ನಿಲ್ಲ ಎಂಬುದನ್ನು ಒಪ್ಪಲು ನನ್ನ ಹೃದಯ ಇನ್ನೂ ಸಿದ್ಧವಿಲ್ಲ. ಈ ಶೂನ್ಯವನ್ನು ತುಂಬಲು ಸಾಧ್ಯವಿಲ್ಲ. ನೀವಿಲ್ಲದೆ ಕನ್ನಡ ಚಿತ್ರರಂಗ ಮೊದಲಿನಂತೆ ಇರಲು ಸಾಧ್ಯವಿಲ್ಲ. ನಿಮ್ಮ ಜೊತೆ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ಸದಾ ಮಿಸ್ ಮಾಡಿಕೊಳ್ಳುತ್ತೇವೆ. ನಮಗೆಲ್ಲ ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ’ ಎಂದು ಬರೆದುಕೊಂಡಿದ್ಧಾರೆ.

ರಾಧಿಕಾ ಪೋಸ್ಟ್ ನೋಡಿದ ಅಪ್ಪು ಫ್ಯಾನ್ಸ್ ಫುಲ್ ಗರಂ ಆಗಿದ್ದು, ಇವತ್ತು ಪೋಸ್ಟ್ ಯಾಕೆ ಹಾಕಿದ್ರಿ ಒಂದು ವರ್ಷದ ನಂತರ ಹಾಕಬಹುದಿತ್ತಲ್ವಾ? ಇವಾಗ ಅಪ್ಪು ಸರ್ ನೆನಪಾಯ್ತಾ? ಡ್ರಾಮಾ ಕ್ವೀನ್ ಎಂದೆಲ್ಲಾ ರಾಧಿಕಾ ಪೋಸ್ಟ್ ಗೆ ಕಾಮೆಂಟ್ ಗಳನ್ನು ಹಾಕುತ್ತಿದ್ದಾರೆ.

 

 

ಇದಕ್ಕೆ ಸ್ಪಷ್ಟನೆ ನೀಡಿರುವ ರಾಧಿಕಾ ಅವರು ‘ಜೀವನದಲ್ಲಿ ಒಬ್ಬರ ಮೇಲೆ ಕೋಪ ಇದ್ದರೂ ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ’ ಎಂದು ಅವರು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top