fbpx
ಸಮಾಚಾರ

“ಭಾರತಕ್ಕೆ ನಿಜವಾದ ಸ್ವತಂತ್ರ ಸಿಕ್ಕಿದ್ದು 2014ರಲ್ಲಿ, 1947ರಲ್ಲಿ ಸಿಕ್ಕಿದ್ದು ಭಿಕ್ಷೆ” ನಟಿ ಕಂಗನಾ ವಿಡಿಯೋಗೆ ವ್ಯಾಪಕ ಆಕ್ರೋಶ

ಸಿನಿಮಾ ವಿಚಾರಗಳಿಗಿಂತ ಕೇವಲ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಾಗುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಭಾರತ ಸ್ವಾತಂತ್ರದ ಬಗ್ಗೆ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು ನಟಿಯ ವಿರುದ್ಧ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

 

 

ಹೌದು, ಈ ಹಿಂದೆ ಟೈಮ್ಸ್ ನೌ ಸಮಿತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಂಗನಾ ರನೌತ್, ಸ್ವಾತಂತ್ರ್ಯದ ಕುರಿತು ಮಾತನಾಡಿದ್ದರು. ‘1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014. ನಾನು ರಾಷ್ಟ್ರೀಯತೆಯ ಬಗ್ಗೆ ಮಾತನಾಡುವಾಗ, ಸೇನೆಯನ್ನು ಬೆಂಬಲಿಸಿ ಹೇಳಿಕೆ ನೀಡುವಾಗ ಮತ್ತು ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿ ಮಾತನಾಡುವಾಗ ನಾನು ಬಿಜೆಪಿಯ (BJP) ಅಜೆಂಡಾವನ್ನು ನಡೆಸುತ್ತಿದ್ದೇನೆ ಎಂದು ಕೆಲವರು ಹೇಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ನಾನು ಕಲಾವಿದೆಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಇರುತ್ತೇನೆ ಎಂದು ಹೇಳಿದ್ದರು.

ಕಂಗನಾ ಅವರ ಈ ಹೇಳಿಕೆಗೆ ವ್ಯಾಪಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ ಪ್ರತಿಕ್ರಿಯೆ ನೀಡಿ ಕಂಗನಾ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಲದೆ ಕಂಗನಾ ರನೌತ್ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top