fbpx
ಸಮಾಚಾರ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ,, ರೋಹಿತ್, ವಿರಾಟ್, ಪಂತ್,ಶಮಿ ಬುಮ್ರಾಗಿಲ್ಲ ಜಾಗ

ಟಿ20 ವಿಶ್ವಕಪ್ ಮುಗಿದ ಬಳಿಕ ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ ಸರಣಿಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಸರಣಿಯ ಮೊದಲ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದು ಎರಡನೇ ಪಂದ್ಯದಲ್ಲಿ ತಂಡವನ್ನು ತಂಡವನ್ನು ಸೇರಿಕೊಂಡು ಮುನ್ನಡೆಸಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಮೊದಲನೇ ಪಂದ್ಯವನ್ನು ಉಪನಾಯಕ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ಅವರಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇದರ ಜೊತೆಗೆ ಅಚ್ಚರಿಯ ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್, ಕೆಎಸ್ ಭರತ್ ಮತ್ತು ಜಯಂತ್ ಯಾದವ್ ಅಂತಹ ಯುವ ಪ್ರತಿಭೆಗಳಿಗೆ ಟೆಸ್ಟ್ ಸರಣಿ ಆಡಲು ಅವಕಾಶ ನೀಡಲಾಗದೆ.

 

 

ಭಾರತ ತಂಡ:
ಅಜಿಂಕ್ಯಾ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ (ಉಪ – ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

ಅಂದಹಾಗೆ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಮೊದಲನೇ ಟೆಸ್ಟ್ ಪಂದ್ಯ ನ. 25 ರಂದು ಕಾನ್ಪುರ ಮತ್ತು ಎರಡನೇ ಟೆಸ್ಟ್ ಪಂದ್ಯವು ಡಿಸೇಂಬರ್ 3 ರಂದು ಮುಂಬೈನಲ್ಲಿ ಜರುಗಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top