fbpx
ದೇವರು

ಬಾಗಿದ ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ಕಳಶ: ಭಕ್ತರದಲ್ಲಿ ಮೂಡಿದ ಆತಂಕ

ಕರ್ನಾಟಕದ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ಕೂಡ ಒಂದು. ಅಲ್ಲಿನ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೆಟ್ಟದ ಮೇಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯಗಳಿಗೆ ಐತಿಹಾಸಿಕ ಹಿನ್ನಲೆಯಿದೆ. ದೇವರ ದರ್ಶನಕ್ಕೆಂದೇ ಇಲ್ಲಿಗೆ ದಿನನಿತ್ಯ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಇಂಥಾ ಮೇಲುಕೋಟೆಯ ಯೋಗನರಸಿಂಹ ಸ್ವಾಮಿ ಬೆಟ್ಟದಲ್ಲಿ ಕಳವಳಕಾರಿ ಘಟನೆಯೊಂದು ನಡೆದಿದೆ.

ಹೌದು, ಯೋಗಾನರಸಿಂಹ ಸ್ವಾಮಿ ದೇವಾಲಯದ ಗೋಪುರ ಕಳಶ ಬಾಗಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಯೋಗಾನರಸಿಂಹ ಸ್ವಾಮಿ ಸನ್ನಿಧಿಯ ಗೋಪುರದಲ್ಲಿ ಕಳಶ ಬಾಗಿದ್ದು, ಕೆಡಕಿನ ಮುನ್ಸೂಚನೆಯೇ ಎಂಬ ಆತಂಕದಲ್ಲಿ ಭಕ್ತರಿದ್ದು, ವಾಲಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಇದನ್ನು ಶೀಘ್ರ ದುರಸ್ಥಿ ಕಾರ್ಯ ನಡೆಸಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಕಳಶ ಬಾಗಿರೋದನ್ನ ನೋಡಿ ಭಕ್ತರು ಬೇಸರದೊಂದಿಗೆ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ. ಭಕ್ತರು ಈ ಗೋಪುರದ ಕಳಶದಲ್ಲಿ ದೇವಾನು ದೇವತೆಗಳು ವಾಸಿಸುತ್ತಾರೆಂಬ ನಂಬಿಕೆಯನ್ನು ಹೊಂದಿದ್ದಾರೆ. ಗರ್ಭಗುಡಿಯ ದೇವರ ದರ್ಶನದಷ್ಟೇ ಕಳಶ ದರ್ಶನ ಮಹತ್ವದಾಗಿದೆ. ಕಳಶ ಬಿದ್ದರೆ ಕೇಡು ನಿಶ್ಚಿತ ಎಂಬ ನಂಬಿಕೆ ಹಿಂದೂ ಧರ್ಮದ್ದಾಗಿದೆ. ಶುಭ ಸಂಕೇತದ ಕಳಸ ಬಾಗಿದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕಳಶ ಹಿಂದಕ್ಕೆ ವಾಲಿ ತಿಂಗಳುಗಳೇ ಕಳೆದ್ರೂ ಅಧಿಕಾರಿಗಳು ಇದನ್ನು ಸರಿಪಡಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯತೆ ಬಗ್ಗೆ ಮೇಲುಕೋಟೆ ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top