fbpx
ಸಮಾಚಾರ

“ಅಪ್ಪುಗೆ ಅವಮಾನ ಮಾಡೋ ಉದ್ದೇಶ ಯಾರಿಗೂ ಇರೋಲ್ಲ” ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ ರಚಿತಾ ರಾಮ್

ನಟ ಪುನೀತ್ ರಾಜ್‍ಕುಮಾರ್ ಅವರ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಾಚರಣೆ ಮಾಡಿದ್ದು ಈಗ ವಿವಾದಕ್ಕೆ ಗುರಿಯಾಗಿದ್ದು ಈಗ ಇದೇ ವಿಚಾರವಾಗಿ ನಟಿ ರಚಿತಾ ರಾಮ್ ಅವರು ಎಲ್ಲಾ ಅಪ್ಪು ಫ್ಯಾನ್ಸ್ ಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ನಟಿ ರಚಿತಾ ರಾಮ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಸ್ಟ್‌ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಅಪ್ಪು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ‘ನಿನ್ನೆಯ ಏಕ್ ಲವ್ ಯಾ ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲ್ ಓಪನ್ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ’ ಎಂದು ಕೇಳಿಕೊಂಡಿದ್ದಾರೆ.

 

 

ಏನಿದು ಘಟನೆ?
ರಕ್ಷಿತಾ ಪ್ರೇಮ್​ ಸಹೋದರ ರಾಣ ಅವರು ‘ಏಕ್​ ಲವ್​ ಯಾ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಪ್ರೇಮ್​ ಅವರು ‘ಏಕ್​ ಲವ್​ ಯಾ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಣ ನಟಿಸುತ್ತಿರುವ ಈ ಚಿತ್ರಕ್ಕೆ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್​ ನಾಯಕಿಯರು. ನೆನ್ನೆ (ನವೆಂಬರ್ 12) ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆದಿತ್ತು. ಈ ಕಾರ್ಯಕ್ರಮ ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕಾರ್ಯಕ್ರಮದ ಆರಂಭದಲ್ಲಿ ಇತ್ತೀಚೆಗಷ್ಟೆ ನಿಧನರಾದ ಎಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ನಮನವನ್ನು ಚಿತ್ರತಂಡ ಸಲ್ಲಿಸಿತು. ಅಷ್ಟಕ್ಕೇ ನಿಲ್ಲಿಸಿ ಕಾರ್ಯಕ್ರಮ ಮುಗಿಸಿದ್ದರೆ ವಿವಾದವಾಗುತ್ತಿರಲಿಲ್ಲ. ನಂತರ ಪುನೀತ್ ಭಾವಚಿತ್ರವಿರುವ ವೇದಿಕೆಯಲ್ಲಿಯೇ ಚಿತ್ರತಂಡ ಶಾಂಪೇನ್ ನ್ನು ಬಾಟಲ್ ಗೆ ಸುರಿದು ಸಂಭ್ರಮಾಚರಣೆ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇನ್ನೂ 15 ದಿನಗಳಾಗಿಲ್ಲ, ಅವರ ಕುಟುಂಬಸ್ಥರು, ಅಭಿಮಾನಿಗಳು ತೀವ್ರ ದುಃಖದಲ್ಲಿದ್ದಾರೆ. ಹೀಗಿರುವಾಗ ಪರಮಾತ್ಮನ ಫೋಟೋ ಎದುರು ಶಾಂಪೇನ್ ಸುರಿದು ಚಿಯರ್ಸ್ ಎಂದು ಸಂಭ್ರಮಿಸುವ ಅಗತ್ಯವೇನಿತ್ತು ಇದು ನಟನಿಗೆ ಮಾಡಿರುವ ಅವಮಾನ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top