fbpx
ಸಮಾಚಾರ

“ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ” ನಾದಬ್ರಹ್ಮ ಹಂಸಲೇಖ ಅವರಿಗೆ ಪೇಜಾವರ ಶ್ರೀ ತಿರುಗೇಟು

ಅಸ್ಪೃಶ್ಯತೆ ಮತ್ತು ಅಸಮಾನತೆ ಬಗ್ಗೆ ನಾದ ಬ್ರಹ್ಮ, ಸಂಗೀತ ಮಾಂತ್ರಿಕ ಹಂಸಲೇಖ ಅವರು ಆಡಿರುವ ಮಾತು ಈಗ ವಿವಾದದ ಕಿಡಿ ಹೊತ್ತಿಸಿದೆ. “ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ” ಎಂದು ಹೇಳಿದ್ದರು.

ಹಂಸಲೇಖರ ಈ ಹೇಳಿಕೆಗೆ ಈಗ ವಿಶ್ವಪ್ರಸನ್ನ ತೀರ್ಥಶ್ರೀ ಅವರು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ನಾವು ದಲಿತರ ಜೊತೆಗಿದ್ದೇವೆ, ದಲಿತರು ನಮ್ಮಿಂದ ಹೊರತಲ್ಲ. ಐಕ್ಯ ಸಂದೇಶ ನೀಡುವ ಸಲುವಾಗಿ ನಮ್ಮ ಕಾರ್ಯಕ್ರಮಗಳು ನಡೆಯುತ್ತವೆ. ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ, ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತೆ. ನಾವಂತೂ ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ.

ಅಲ್ಲದೇ, ಇಂಥ ಮಾತುಗಳು ಹಂಸಲೇಖ ಅವರಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಹೀಗೆ ಸಾಕಷ್ಟು ಮಂದಿ ಮಾಡ್ತಾರೆ, ಆದ್ರೆ ಹಂಸ ಲೇಖರಿಗೆ ಇದರಿಂದ ಪ್ರಚಾರ ಬೇಕಿರಲಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top