fbpx
ಸಮಾಚಾರ

ಮಹಿಳಾ ಉದ್ಯೋಗಿಗೆ ಅಶ್ಲೀಲ ಸಂದೇಶ: ಟೆಸ್ಟ್ ತಂಡದ ನಾಯಕತ್ವ ತೊರೆದ ಟಿಮ್ ಪೇನ್; ಆಘಾತದಲ್ಲಿ ಆಸೀಸ್

ಮಹಿಳಾ ಸಹೋದ್ಯೋಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾದಿಂದ ತನಿಖೆಗೆ ಒಳಪಟ್ಟ ಬಳಿಕ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವವನ್ನು ಟಿಮ್ ಪೇನ್ ತೊರೆದಿದ್ದಾರೆ.

ಹೌದು.. ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡವನ್ನು ಕಳೆದ ನಾಲ್ಕು ವರ್ಷಗಳಿಂದ ಮುನ್ನಡೆಸುತ್ತಿದ್ದ ಟಿಮ್ ಪೈನ್ ಅತ್ಯಂತ ಕೆಟ್ಟ ರೀತಿಯಲ್ಲಿ ನಾಯಕತ್ವವನ್ನು ತ್ಯಜಿಸಿದ್ದು, ಮೈದಾನದಾಚೆಯ ವಿವಾದವೊಂದಕ್ಕೆ ಸಿಲುಕಿರುವ ಆಸಿಸ್ ನಾಯಕ ಟಿಮ್ ಪೈನ್ ದೊಡ್ಡ ಸರಣಿ(ಆ್ಯಶಸ್) ಯೊಂದು ಸನಿಹದಲ್ಲಿರುವಾಗಲೇ ನಾಯಕತ್ವ ತ್ಯಜಿಸಿದ್ದಾರೆ. ಇದು ಟಿ20 ಚಾಂಪಿಯನ್ ಪಟ್ಟಕ್ಕೇರಿರುವ ಆಸ್ಟ್ರೇಲಿಯಾ ತಂಡಕ್ಕೆ ಹಾಗೂ ಅದರ ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ.

ಈ ಬಗ್ಗೆ ಮಾತನಾಡಿರುವ ಟಿಮ್ ಪೈನ್, ‘ಇದು ನಂಬಲಾಗದ ನಿರ್ಧಾರ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ನನ್ನ ಕುಟುಂಬದ ಪಾಲಿಗೆ ಇದು ಸರಿಯಾದ ನಿರ್ಧಾರವಾಗಿದೆ. ಆಗ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದೆ. ಈ ಘಟನೆ ಸಾರ್ವಜನಿಕವಾಗಿ ದೊಡ್ಡ ಚರ್ಚೆಯಾಗಿದೆ. ಈ ಪ್ರಕರಣ ಸಬಂಧ ನನ್ನ ಹೆಂಡತಿ, ಕುಟುಂಬಸ್ಥರು ಹಾಗೂ ಕ್ರಿಕೆಟ್​ ಆಸ್ಟ್ರೇಲಿಯಾಗೆ ನಾನು ಕ್ಷಮೆಯಾಚಿಸುತ್ತೇನೆ. ನಾಯಕತ್ವದಿಂದ ಕೆಳಗಿಳಿಯುವ ತಕ್ಷಣದ ನಿರ್ಧಾರ ಸರಿಯಾಗಿದೆ ಎಂದು ನಾನು ನಂಬುತ್ತೇನೆ. ಆಸೀಸ್ ಸರಣಿಗೂ ಮುನ್ನ ದೊಡ್ಡ ವಿವಾದ ಸೃಷ್ಟಿಸಲು ನಾನು ಬಯಸುವುದಿಲ್ಲ. ಹೀಗಾಗಿ ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ’ ಎಂದು ಟಿಮ್ ತಿಳಿಸಿದ್ದಾರೆ.

ಏನಿದು ಪ್ರಕರಣ?
2017ರಲ್ಲಿ ಕ್ರಿಕೆಟ್ ಟಾಸ್ಮೇನಿಯಾದ ಉದ್ಯೋಗಿ ಜೊತೆಗಿನ ಈ ಪ್ರಕರಣ ಬಹಿರಂಗವಾಗಿತ್ತು. ಸಹೋದ್ಯೋಗಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಟಿಮ್ ಪೈನ್ ವಿರುದ್ಧ ತನಿಖೆಯನ್ನು ನಡೆಸುತ್ತಿದೆ. ಇದೇ ವಿಚಾರವಾಗಿ ಆಸಿಸ್ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಗಳು ಬಿತ್ತಾರವಾಗುತ್ತಿದ್ದು, ಹೀಗಾಗಿ ಟಿಮ್ ಪೈನ್ ಈ ರಾಜೀನಾಮೆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top