fbpx
ಸಮಾಚಾರ

ಬ್ರೇಕಿಂಗ್ ನ್ಯೂಸ್: ಖ್ಯಾತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಭಾರತೀಯ ಚಿತ್ರರಂಗದ ಹಿರಿಯ ನಟ ಮತ್ತು ಮಕ್ಕಳ್ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಮಲ್ ಅವರನ್ನು ಚೆನ್ನೈ ನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.

 

 

ಇತ್ತೀಚಿಗೆ ಕಮಲ್ ಅವರು ಕೆಲಸದ ಕಾರಣಕ್ಕಾಗಿ ಅಮೆರಿಕಾ ಪ್ರವಾಸ ಹೋಗಿದ್ದರು. ಪ್ರವಾಸದಿಂದ ಹಿಂತಿರುಗಿದ ನಂತರ ಸ್ವಲ್ಪ ಕೆಮ್ಮು ಇತ್ತು. ಪರೀಕ್ಷೆಯ ನಂತರ ಕೋವಿಡ್ 19 ಸೋಂಕು ದೃಢಪಟ್ಟಿದೆ. ಕಾರಣ ಕಮಲ್ ಅವರು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ ಆಗಿ ಅಲ್ಲಿಯೇ ಚಿಕಿತ್ಸೆ ಪಡೆಯಲಾರಂಭಿಸಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ತಮಗೆ ಕೊರೋನಾ ಸೋಂಕು ದೃಢವಾದ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಸ್ವತಃ ಕಮಲ್ ಹಾಸನ್ ಅವರೇ ಬಹಿರಂಗಪಡಿಸಿದ್ದು ನಾನು ಆಸ್ಪತ್ರೆಯಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ವೈರಸ್‌ನ ಹರಡುವಿಕೆ ನಿಂತಿಲ್ಲ ಎಂಬುದನ್ನು ಎಲ್ಲರೂ ಎಚ್ಚರಿಕೆಯಿಂದ ಅರ್ಥಮಾಡಿಕೊಳ್ಳಲು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top