fbpx
ಸಮಾಚಾರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್.ನಾರಾಯಣ್ ಪುತ್ರ ನಟ ಪಂಕಜ್ ನಾರಾಯಣ್

ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ ಅವರ ಮನೆಯಲ್ಲಿ ಶುಭ ಸಮಾರಂಭ ನೆರವೇರಿದೆ. ಅವರ ಪುತ್ರ ಪಂಕಜ್​ ನಾರಾಯಣ್ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಪಂಕಜ್ ಅವರ ಮದುವೆ ನಡೆದಿದೆ. ಪಂಕಜ್ ಅವರನ್ನು ಮದುವೆ ಆಗಿರುವ ಹುಡುಗಿಯ ಹೆಸರು ರಕ್ಷಿತಾ ಸುರೇಂದರ್. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.

 

 

ಗುರುಹಿರಿಯರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸ್ಯಾಂಡಲ್‍ವುಡ್ ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿಯಾಗಿ ನವ ವಧು, ವರರನ್ನು ಆಶಿರ್ವದಿಸಿದ್ದಾರೆ. ಪಂಕಜ್ ಮತ್ತು ರಕ್ಷಿತಾ ದಂಪತಿಗೆ ಶುಭ ಕೋರಿ, ಆಶೀರ್ವಾದ ಮಾಡಲು ಕನ್ನಡ ಚಿತ್ರರಂಗದ ಗಣ್ಯರು ಮತ್ತು ಇಬ್ಬರ ಸ್ನೇಹಿತರು ಮತ್ತು ಕುಟುಂಬದವರು ಮದುವೆಗೆ ಬಂದು ಶುಭ ಕೋರಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ಸೃಜನ್‍ಲೋಕೇಶ್, ಚಿಕ್ಕಣ್ಣ, ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ನಟಿಯರಾದ ಭಾರತಿ ವಿಷ್ಣುವರ್ಧನ್, ಶೃತಿ, ಸುಧಾರಾಣಿ, ಗಿರಿಜಾ ಲೋಕೇಶ್, ಶ್ವೇತಾ ಚೆಂಗಪ್ಪ, ನಿರ್ದೇಶಕ ಯೋಗರಾಜಭಟ್ ಮುಂತಾದವರು ಆಗಮಿಸಿ ನೂತನ ವಧು-ವರರಿಗೆ ಶುಭ ಹಾರೈಸಿದರು.

ಪಂಕಜ್​ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಲೆಬ್ರಿಟಿ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಬೇಕಿತ್ತು. ಆದರೆ ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top