fbpx
ಸಮಾಚಾರ

ಪ್ರಿಯಾಂಕಾ ಚೋಪ್ರಾ ದಾಂಪತ್ಯ ಜೀವನದಲ್ಲಿ ಬಿರುಕು? ಪತಿಯಿಂದ ವಿಚ್ಛೇದನ ಪಡೆಯುತ್ತಾರಾ ಪ್ರಿಯಾಂಕಾ ಚೋಪ್ರಾ?

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಹೆಸರಿನ ಜೊತೆಗೆ ಇದ್ದ ಪತಿ ನಿಕ್ ಜೋನಾಸ್ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಬಾಲಿವುಡ್‌ ಅಂಗಳಲದಲ್ಲಿ ಹರಿದಾಡುತ್ತಿದೆ.

 

 

ಮದುವೆ ಆದ ಬಳಿಕ ಪ್ರಿಯಾಂಕಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಹೆಸರನ್ನು ‘ಪ್ರಿಯಾಂಕಾ ಚೋಪ್ರಾ ಜೋನಸ್​’ ಎಂದು ಬದಲಾಯಿಸಿಕೊಂಡಿದ್ದರು. ಆದರೆ ಈಗ ಪತಿಯ ಸರ್​ನೇಮ್​ ತೆಗೆದುಹಾಕಿದ್ದಾರೆ. ‘ಜೋನಸ್​’ ಹೆಸರನ್ನು ಕೈ ಬಿಟ್ಟಿದ್ದಾರೆ. ಮೊದಲಿನಂತೆ ಕೇವಲ ‘ಪ್ರಿಯಾಂಕಾ ಚೋಪ್ರಾ’ ಎಂದಷ್ಟೇ ಇಟ್ಟುಕೊಂಡಿದ್ದಾರೆ. ಹಾಗಾಗಿ ಈ ಜೋಡಿಯ ನಡುವೆ ಬಿರುಕು ಮೂಡಿರಬಹುದು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ಶೀಘ್ರವೇ ಅವರು ವಿಚ್ಛೇದನ (Divorce) ಪಡೆಯಬಹುದು ಅಂತ ಕೂಡ ಬಾಲಿವುಡ್ ಮಾಧ್ಯಮಗಳು ವರದಿಮಾಡಿವೆ.

ವದಂತಿ ತಳ್ಳಿ ಹಾಕಿದ ತಾಯಿ:
ಈ ವದಂತಿ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಮಧು ಚೋಪ್ರಾ ಅವರು ಪ್ರತಿಕ್ರಿಯಿಸಿ ಇಬ್ಬರ ಮಧ್ಯೆ ಬಿರುಕು ಉಂಟಾಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಸದ್ಯ ಪ್ರಿಯಾಂಕಾ ಅವರ ಇನ್‌ಸ್ಟಾಗ್ರಾಮ್ ಪ್ರಿಯಾಂಕಾ ಚೋಪ್ರಾ ಜೋನಾಸ್ ಬದಲಿಗೆ ಅವರ ಮೊದಲ ಹೆಸರನ್ನು ಮಾತ್ರ ಹೊಂದಿದೆ. ಬದಲಾವಣೆಯ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top