fbpx
ರಾಜಕೀಯ

ಮದುವೆ ವಿಚಾರ ಮುಚ್ಚಿಟ್ಟು ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಾ. ಸೂರಜ್ ರೇವಣ್ಣರ ನಾಮಪತ್ರ ತಿರಸ್ಕರಿಸಿ!

ವಿಧಾನ ಪರಿಷತ್ ಚುನಾವಣೆಗೆ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಎಂಟ್ರಿಯಾಗಿದೆ. ಮಾಜಿ ಮಂತ್ರಿ ರೇವಣ್ಣನವರ ಪುತ್ರ ಡಾ. ಸೂರಜ್ ರೇವಣ್ಣ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ  ನಾಮಪತ್ರ ಸಲ್ಲಿಸಿದರು. ಆದರೆ ಸೂರಜ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಸುಳ್ಳು ದಾಖಲೆಯನ್ನು ನೀಡಿದ್ದು, ಅವರು ನಾಮಪತ್ರ ಸಲ್ಲಿಸುವಾಗ ಮದುವೆ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದರು.

ಆದರೆ ಮದುವೆ ವಿಷಯದ ಬಗ್ಗೆ  ಯಾವುದೇ ಸಂಬಂಧವಿಲ್ಲ ಎಂದು ಸೂರಜ್ ರೇವಣ್ಣ ಅವರು ಅರ್ಜಿಯಲ್ಲಿ ನಮೂದಿಸಿದ್ದಾರೆ. ಪ್ರಜಾಪ್ರಭುತ್ವ ಕಾಯ್ದೆ ಪ್ರಕಾರವಾಗಿ ಅರ್ಜಿಯಲ್ಲಿ ಮದುವೆಯ ವಿಷಯವನ್ನು ಉಲ್ಲೇಖಿಸಬೇಕಿತ್ತು. ಆದರೆ ಸೂರಜ್ ರೇವಣ್ಣ ಅವರು ಮುಚ್ಚಿಟ್ಟು ನಾಮಪತ್ರವನ್ನು ಸಲ್ಲಿಸಿದ್ದಾರೆ. ಒಂದು ವೇಳೆ ಮದುವೆ ಆಗಿದ್ದರೆ ಆಗಿದೆ ಎಂದು, ಆಗಿಲ್ಲವಾಗಿದ್ದರೆ ಆಗಿಲ್ಲ ಎಂದು ಬರೆಯಬೇಕಿತ್ತು.  ಎಂದರು ವಕೀಲ ದೇವರಾಜೇಗೌಡ. ಅವರು ಮದುವೆ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಪತ್ನಿಯ ಚರ, ಸ್ಥಿರ ಆಸ್ತಿಗಳ ಬಗ್ಗೆ ದಾಖಲಿಸಬೇಕಿತ್ತು ಎಂದರು.

ಈ ಎಲ್ಲಾ ದಾಖಲೆಗಳನ್ನು ನಾಳೆ ಬೆಳಗ್ಗೆ ಹೈಕೋರ್ಟ್‍ನಲ್ಲಿ ರಿಟ್ ಫೈಲ್ ದಾಖಲಿಸಲಾಗುವುದು ಎಂದು ತಿಳಿಸಿದರು. ಸೂರಜ್ ರೇವಣ್ಣ ಅವರು ನೀಡಿರುವ ನಾಮಪತ್ರವನ್ನು ತಿರಸ್ಕರಿಸಬೇಕು. ಇಲ್ಲದಿದ್ದರೇ ತನಿಖೆ ಮುಗಿಯುವವರೆಗೆ ಚುನಾವಣೆಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top