fbpx
ಸಮಾಚಾರ

ಬಿಗ್​ ಬಾಸ್​ ನಿರೂಪಕರ ಬದಲಾವಣೆ: ನಟನ ಸ್ಥಾನಕ್ಕೆ ಬಂದ ಬಹುಭಾಷಾ ನಟಿ

ಕಿರುತೆರೆಯ ಅಂತ್ಯಂತ ಜನಪ್ರಿಯ ರಿಯಾಲಿಟಿ ಷೋ ಅನಾದರೆ ಅದು ‘ಬಿಗ್ ಬಾಸ್’ ಕೇವಲ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್​ ಆಗಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್​ ಹಿಂದಿಯಲ್ಲಿ ಸಲ್ಮಾನ್​ ಖಾನ್​ ಅವರು ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ತೆಲುಗು ಮತ್ತು ತಮಿಳಿನಲ್ಲಿ ಬದಲಾವಣೆಗಳು ಆಗುತ್ತಿವೆ. ತಮಿಳು ಬಿಗ್​ ಬಾಸ್​ 5 ನಿರೂಪಣೆ ಮಾಡುತ್ತಿದ್ದ ಕಮಲ್​ ಹಾಸನ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಬೇರೆ ನಿರೂಪಕರು ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

 

 

ಬಿಗ್ ಬಾಸ್ ತಮಿಳು ನಿರ್ಮಾಪಕ ಕಮಲ್​ ಹಾಸನ್​ ಅವರಿಗೆ ಕೊವಿಡ್​ ಸೋಂಕು ತಗುಲಿದ್ದು ಕಾರ್ಯಕ್ರಮದ ನಿರೂಪಣೆಗೆ ಬ್ರೇಕ್​ ನೀಡಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಿರೂಪಣೆಯ ಜಬಾವ್ದಾರಿಯನ್ನು ಯಾರು ಹೊತ್ತುಕೊಳ್ಳುತ್ತಾರೆ ಎಂಬ ಪ್ರಶ್ನೆ ಮೂಡಿತು. ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ಅವರಿಗೆ ಈ ಕೆಲಸ ವಹಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಡಿತ್ತು. ಆದರೆ ಅದು ನಿಜವಾಗಿಲ್ಲ. ಸದ್ಯ ಬಹುಭಾಷಾ ಕಲಾವಿದೆ ರಮ್ಯಾ ಕೃಷ್ಣ ಹೆಸರು ಕೇಳಿಬರುತ್ತಿದೆ.

ಕೇವಲ ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿರುವ ರಮ್ಯಾ ಕೃಷ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್ ನಿರೂಪಣೆ ಮಾಡಿದರೆ ಶೋಗೆ ಮತ್ತಷ್ಟು ಕಳೆ ಹೆಚ್ಚಾಗಲಿದೆ ಎಂಬುದು ಆಯೋಜಕರ ಲೆಕ್ಕಾಚಾರ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top