fbpx
ರಾಜಕೀಯ

ಧಾರ್ಮಿಕ ಅವಹೇಳನ: ನಟಿ ಕಂಗನಾ ರಣಾವತ್‌ಗೆ ಸಮನ್ಸ್.

ಒಂದು ಕಾಲದಲ್ಲಿ ತಮ್ಮ ಚಂದನೆಯ ನಟನೆಯ ಮೂಲಕ ಚಿತ್ರಪ್ರೇಮಿಗಳನ್ನ ಮಂತ್ರಮುಗ್ದರನ್ನಾಗಿಸಿದ್ದಾಕೆ ಕಂಗನಾ ರಾನವತ್. ಆದ್ರೆ ಇಂಥಾ ಕಂಗನಾ ಈಗೀಗ ಕೇವಲ ಕಾಂಟ್ರವರ್ಷಿಯಲ್ ಕ್ವೀನ್ ಆಗಿ ಉಳಿದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ವಿಚಾರಗಳನ್ನ ಬಿಟ್ಟು ಕೇವಲ ವಿವಾದಗಳಿಗೆ ಮಾತ್ರ ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿದೆ.

ಸಿಖ್ಖರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆ ಬಾಲಿವುಡ್ ನಟಿ ಕಂಗನಾ ರಣಾವತ್ ರಿಗೆ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿ ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್ 6ರಂದು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ನೇತೃತ್ವದ ಸಮಿತಿಯ ಎದುರು ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಮುಂಬೈನ ಉದ್ಯಮಿ ಮತ್ತು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಹಾಗೂ ಶಿರೋಮಣಿ ಅಕಾಲಿ ದಳದ ಮುಖಂಡರು ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನಲ್ಲಿ “ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ವರ್ಷಪೂರ್ತಿ ನಡೆಸಿದ ಪ್ರತಿಭಟನೆಯನ್ನು ಉದ್ದೇಶಪೂರ್ವಕವಾಗಿ ಖಲಿಸ್ತಾನಿ ಎಂದು ಬಿಂಬಿಸಿದ್ದಾರೆ. ಅಲ್ಲದೇ ರೈತರನ್ನು ಖಲಿಸ್ತಾನಿಗಳು ಎಂದು ಕರೆದಿದ್ದಾರೆ,” ಎಂದು ದೂರಿದ್ದರು.

ಈ ಹಿನ್ನಲೆಯಲ್ಲಿ ನಟಿ ಕಂಗನಾ ರಣಾವತ್ ರಿಗೆ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿ ಸಮನ್ಸ್ ಜಾರಿಗೊಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top