fbpx
ಸಮಾಚಾರ

“ಸಂಗೀತ ಯುದ್ಧವನ್ನು ತಪ್ಪಿಸುತ್ತದೆ” ಸರಿಗಮಪ ಶೋಗೆ ವಾಪಸ್ಸು ಬರುವ ಬಗ್ಗೆ ಡಾ.ಹಂಸಲೇಖ ಹೇಳಿದ್ದೇನು?

ಕನ್ನಡ ಚಿತ್ರರಂಗದ ದೈತ್ಯ ದೇಸಿಪ್ರತಿಭೆ ನಾದಬ್ರಹ್ಮ ಹಂಸಲೇಖ ಅವರು ದಲಿತರ ಮಳೆ ನಡೆಯುತ್ತಿರುವ ಅಸ್ಪೃಶ್ಯತೆ ವಿಚಾರವಾಗಿ ನೀಡಿದ್ದ ಹೇಳಿಕೆ ಸಮಾಜದಲ್ಲಿ ಸಂಚಲವನ್ನೇ ಸೃಷ್ಟಿಸಿದೆ. “ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ” ಎಂದು ಹೇಳಿದ್ದರು. ಹಂಸಲೇಖರ ಈ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

ಈ ಮಧ್ಯೆ ಹಂಸಲೇಖ ಅವರು ಸರಿಗಮಪ ರಿಯಾಲಿಟಿ ಶೋ ಬಿಡುತ್ತಿದ್ದಾರಾ? ಎಂಬ ಅನುಮಾನ ಪ್ರೇಕ್ಷಕರಲ್ಲಿ ಮೂಡಿತ್ತು. ಏಕೆಂದರೆ ಈ ವಿವಾದ ನಡೆದ ನಂತರ ಕಳೆದ ವಾರದ ಸಂಚಿಕೆಯಲ್ಲಿ ಹಂಸಲೇಖ ಅವರು ಭಾಗವಹಿಸಿರಲಿಲ್ಲ ಇದು ಸಹಜವಾಗಿ ಹಂಸಲೇಖ ಅವರು ಸರಿಗಮಪ ರಿಯಾಲಿಟಿ ಶೋನಿಂದ ಹಿಂದೆ ಸರಿದರಾ ಎಂಬ ಶಂಕೆ ಮೂಡುತ್ತಿದೆ. ಅವರು ಮತ್ತೆ ಶೋಗೆ ಬರುವುದಿಲ್ಲ ಎನ್ನುವ ಮಾತನ್ನು ಕೆಲವರು ಹೇಳಿದ್ದರು. ಈ ಬಗ್ಗೆ ಈಗ ಸ್ವತಃ ಹಂಸಲೇಖ ಅವರೇ ಸ್ಪಷ್ಟನೆ ನೀಡಿದ್ದಾರೆ.

‘ಪ್ರೀತಿಯ ರಾಘು, ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ. ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತಿದ್ದೇನೆ. ಬೇಗ ಬಂದು ಸೇರಿಕೊಳ್ಳುತ್ತೇನೆ’ ಎಂದು ಜೀ ಕನ್ನಡ ಬಿಸ್ನೆಸ್​ ಹೆಡ್​ ರಾಘವೇಂದ್ರ ಹುಣಸೂರು ಅವರಿಗೆ ಹಂಸಲೇಖ ಪತ್ರ ಬರೆದಿದ್ದಾರೆ.

 

 

ಸ್ಪಷ್ಟನೆ ನೀಡಿದ್ದ ರಾಘವೇಂದ್ರ ಹುಣಸೂರು:
ಹಂಸಲೇಖ ಸರಿಗಮಪ ಕಾರ್ಯಕ್ರಮಕ್ಕೆ ಬರದಿದ್ದಕ್ಕೆ ಅಭಿಮಾನಿಗಳು ಚಾನೆಲ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಆಗ ಚಾನೆಲ್ ಹೆಡ್ ರಾಘವೇಂದ್ರ ಹುಣಸೂರು ಸಹ ಸ್ಪಷ್ಟನೆ ನೀಡಿದ್ದರು. ‘ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ’ ಎಂದು ರಾಘವೇಂದ್ರ ಹುಣಸೂರು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top