fbpx
ಸಮಾಚಾರ

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಶ್ರುತಿ ಅವರು ನೀಡಿದ್ದ ದೂರು ಆಧರಿಸಿ ಸಂಜ್ಞೆ ಮೂಲಕ ಮಹಿಳೆ ಗೌರವಕ್ಕೆ ಧಕ್ಕೆ (354,509) ಲೈಂಗಿಕ ಕಿರುಕುಳ (ಐಪಿಸಿ 354ಎ) ಹಾಗೂ ಜೀವಬೆದರಿಕೆ (ಐಪಿಸಿ 506) ಆರೋಪದಡಿ 2018ರಲ್ಲಿ ಪ್ರಕರಣ ದಾಖಲಾಗಿತ್ತು. ‘ವಿಸ್ಮಯ’ ಸಿನಿಮಾ ಚಿತ್ರೀಕರಣದ ವೇಳೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗುತ್ತಿತ್ತು.

ಆರೋಪಕ್ಕೆ ಸಂಬಂಧ ಪಟ್ಟಂತೆ ಅರ್ಜುನ್ ಸರ್ಜಾ ಹಾಗೂ ಹಲವರನ್ನು ವಿಚಾರಣೆ ನಡೆಸಲಾಗಿತ್ತು. ಆರೋಪ ಸಾಬೀತುಪಡಿಸುವ ಯಾವುದೇ ಪುರಾವೆಗಳು ಸಿಗದಿದ್ದರಿಂದ ಪೊಲೀಸರು, ನ್ಯಾಯಾಲಯಕ್ಕೆ ಬಿ–ರಿಪೋರ್ಟ್ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಪ್ರಕರಣ ಸಂಬಂಧ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಟಿ ಶ್ರುತಿ ಹರಿಹರನ್ ಅವರಿಗೆ ನೋಡಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಗಳು ಮುಂದ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top