fbpx
ಸಮಾಚಾರ

ಈವಾರದ ‘ಸರಿಗಮಪ’ ಸಂಚಿಕೆಯಲ್ಲಿ ಹಂಸಲೇಖ ಇರಲಿಲ್ಲವೇಕೇ?; ವಾಹಿನಿ ಕಡೆಯಿಂದ ಸ್ಪಷ್ಟನೆ, ರಾಘವೇಂದ್ರ ಹುಣಸೂರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದೈತ್ಯ ದೇಸಿಪ್ರತಿಭೆ ನಾದಬ್ರಹ್ಮ ಹಂಸಲೇಖ ಅವರು ದಲಿತರ ಮಳೆ ನಡೆಯುತ್ತಿರುವ ಅಸ್ಪೃಶ್ಯತೆ ವಿಚಾರವಾಗಿ ನೀಡಿದ್ದ ಹೇಳಿಕೆ ಸಮಾಜದಲ್ಲಿ ಸಂಚಲವನ್ನೇ ಸೃಷ್ಟಿಸಿದೆ. “ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ” ಎಂದು ಹೇಳಿದ್ದರು. ಹಂಸಲೇಖರ ಈ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಮಧ್ಯೆ ಹಂಸಲೇಖ ಅವರು ಸರಿಗಮಪ ರಿಯಾಲಿಟಿ ಶೋ ಬಿಡುತ್ತಿದ್ದಾರಾ? ಎಂಬ ಅನುಮಾನ ಪ್ರೇಕ್ಷಕರಲ್ಲಿ ಮೂಡಿತ್ತು. ಏಕೆಂದರೆ ಈ ವಿವಾದ ನಡೆದ ನಂತರ ಕಳೆದ ವಾರದ ಸಂಚಿಕೆಯಲ್ಲಿ ಹಂಸಲೇಖ ಅವರು ಭಾಗವಹಿಸಿರಲಿಲ್ಲ ಇದು ಸಹಜವಾಗಿ ಹಂಸಲೇಖ ಅವರು ಸರಿಗಮಪ ರಿಯಾಲಿಟಿ ಶೋನಿಂದ ಹಿಂದೆ ಸರಿದರಾ ಎಂಬ ಶಂಕೆ ಮೂಡುತ್ತಿದೆ.

 

 

ಅವರು ಮತ್ತೆ ಶೋಗೆ ಬರುವುದಿಲ್ಲ ಎನ್ನುವ ಮಾತನ್ನು ಕೆಲವರು ಹೇಳಿದ್ದರು. ಈಗ ಇದಕ್ಕೆ ಜೀ ಕನ್ನಡ ಬಿಸ್ನೆಸ್​ ಹೆಡ್ ರಾಘವೇಂದ್ರ ಹುಣಸೂರು ಸ್ಪಷ್ಟನೆ ನೀಡಿದ್ದಾರೆ. ‘ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ’ ಎಂದು ರಾಘವೇಂದ್ರ ಹುಣಸೂರು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top