fbpx
ಸಮಾಚಾರ

ನಾದಬ್ರಹ್ಮ ಡಾ.ಹಂಸಲೇಖಗೆ ದೊಡ್ಡ ಜಯ: ದೂರು ದಾಖಲಿಸಿದ್ದವರಿಗೆ ‘ಹೈಕೋರ್ಟ್’ನಲ್ಲಿ ತೀವ್ರ ಮುಖಭಂಗ

ಕನ್ನಡ ಚಿತ್ರರಂಗದ ದೈತ್ಯ ದೇಸಿಪ್ರತಿಭೆ ನಾದಬ್ರಹ್ಮ ಹಂಸಲೇಖ ಅವರು ದಲಿತರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ವಿಚಾರವಾಗಿ ನೀಡಿದ್ದ ಹೇಳಿಕೆ ಸಮಾಜದಲ್ಲಿ ಸಂಚಲವನ್ನೇ ಸೃಷ್ಟಿಸಿತ್ತು. ಈ ವಿಚಾರವಾಗಿ ವಿರೋಧಿಗಳು ನಾದಬ್ರಹ್ಮನ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಸಂವಿಧಾನಕ್ಕೆ ಬೆಲೆ ಕೊಟ್ಟು ಹಂಸಲೇಖ ವಿಚಾರಣೆಯನ್ನು ಕೂಡ ಎದುರಿಸಿದ್ದರು. ಈ ಪ್ರಕರಣದಲ್ಲಿ ಈಗ ಡಾ.ಹಂಸಲೇಖಾರಿಗೆ ದೊಡ್ಡ ಗೆಲುವಾಗಿದ್ದು ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆ ಮೂಲಕ ಹಂಸಲೇಖ ಹೇಳಿಕೆಯನ್ನು ವಿವಾದಗೊಳಿಸಿ ಕೋರ್ಟ್‌ ಮೆಟ್ಟಿಲೇರಿದವರಿಗೆ ತೀವ್ರ ಮುಖಭಂಗವಾಗಿದೆ.

ಪೇಜಾವರ ಶ್ರೀ ಕುರಿತು ಹಂಸಲೇಖ ಅವರು ನೀಡಿದ ಹೇಳಿಕೆಯ ವಿರುದ್ಧ ಬೆಂಗಳೂರಿನ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಷೆ ನೀಡಿದೆ. ತನ್ನ ವಿರುದ್ಧ ದಾಖಲಾದ ದೂರು ಸಂಬಂಧ ಹಂಸಲೇಖ ಅವರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ರಿಟ್‌ ಅರ್ಜಿಯಲ್ಲಿ ತನ್ನ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಗಳಿಗೆ ತಡೆ ನೀಡಿದೆ.

ಏನಿದು ವಿವಾದ?
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಈ ದೇಶದ ಗಂಭೀರ ಸಮಸ್ಯೆಗಳಲ್ಲಿ ಒಂದಾಗಿರುವ ಜಾತೀಯತೆ ಮತ್ತು ಅಸ್ಪೃಶ್ಯತೆ ಬಗ್ಗೆ ಮಾತನಾಡಿದ್ದರು. “ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ” ಎಂದು ಹೇಳಿದ್ದರು. ಹಂಸಲೇಖರ ಈ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top