fbpx
ಸಮಾಚಾರ

‘ಗರುಡ ಗಮನ ವೃಷಭ ವಾಹನ’ ಸಿನಿಮಾದ ಮೇಲೆ ಆಕ್ರೋಶಗೊಂಡ ಮಾದಪ್ಪನ ಭಕ್ತರು: ಬೇಷರತ್ ಕ್ಷಮೆಗೆ ಆಗ್ರಹ

ಕಳೆದ ವಾರವಷ್ಟೇ ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ‘ಗರುಡಗಮನ ವೃಷಭವಾಹನ’ ಚಿತ್ರವೂ ಹಿಂದೂಗಳ ಕೆಂಗಣ್ಣಿಗೆ ತುತ್ತಾಗಿದೆ. ರಾಜ್ ಬಿ ಶೆಟ್ಟಿ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿರುವ ಈ ಸಿನಿಮಾದ ಶೈಲಿ, ಕಥಾವಸ್ತು, ಹೊಸತನಕ್ಕಾಗಿ ಎಲ್ಲೆಡೆಯಿಂದ ಪ್ರಶಂಸೆಯನ್ನು ಪಡೆಯುತ್ತಿದೆ. ಈ ಮಧ್ಯೆ ಸಿನಿಮಾ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ಆರೋಪ ಕೇಳಿಬಂದಿದೆ.

 

 

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಕೌರ್ಯದ ದೃಶ್ಯಕ್ಕೆ ಮಾದೇಶ್ವರ ಸ್ವಾಮಿ ಕುರಿತ ಜನಪದ ಹಾಡು ಬಳಕೆ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲೆ ದೃಶ್ಯಕ್ಕೆ ಮಹದೇಶ್ವರ ಸ್ವಾಮಿ ಕುರಿತು ಜನಪದ ಹಾಡನ್ನು ಏಕೆ ಬಳಸಿದ್ದಾರೆ? ವಿಕೃತ ಮೆರೆಯುವ ದೃಶ್ಯಕ್ಕೆ ಮಹದೇಶ್ವರನ ಜನಪದ ಹಾಡು ಬಳಕೆ ಅಕ್ಷಮ್ಯ ಎಂದು ಖಂಡಿಸಿದ್ದಾರೆ.

ಚಿತ್ರದಲ್ಲಿ ಸೋಜುಗಾದ ಸೂಜು ಮಲ್ಲಿಗೆ ಹಾಡು ಬಳಕೆಗೆ ಮಾದಪ್ಪನ ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಮಲೈಮಹದೇಶ್ವರರ ಭಕ್ತಿಗೀತೆಯನ್ನ ಕೆಟ್ಟದಾಗಿ ಬಳಸಿಕೊಳ್ಳಲಾಗಿದೆ. ಕೊಲೆ ಮಾಡಿ ಕುಣಿಯುವ ದೃಶ್ಯಕ್ಕೆ ಹಾಡು ಬಳಸಿರೋದು ಸರಿಯಲ್ಲ. ಸಂಬಂಧವೇ ಇರದ ದೃಶ್ಯಕ್ಕೆ ಅಸಹಜವಾಗಿ ಮಹದೇಶ್ವರನ ಹಾಡು ಬಳಕೆ ಮಾಡಲಾಗಿದೆ ಎಂದು ಚಾಮರಾಜನಗರದ ಕಲಾವಿದರು ಹಾಗೂ ಮಾದಪ್ಪ ಭಕ್ತರಿಂದ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಮಹದೇಶ್ವರ ಬೆಟ್ಟದ ವ್ಯಾಪ್ತಿಯವರೇ ಆದ ಯುವ ಸಾಹಿತಿ ಸ್ವಾಮಿ ಪೊನ್ನಾಚಿ ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ‘ಗರುಡ ಗಮನ, ವೃಷಭ ವಾಹನ ಚಿತ್ರ ಯಶಸ್ವಿಯಾಗಲಿ.. ಆದರೆ, ಕೊಲೆ ಮಾಡಿ ಕುಣಿಯೋ ದೃಶ್ಯವೊಂದರಲ್ಲಿ ಆ ದೃಶ್ಯಕ್ಕೆ ಸಂಬಂಧವೇ ಇರದ, ಅಸಹಜವಾಗಿ ಮಹದೇಶ್ವರನ ಹಾಡು ಸೂಜುಗಾದ ಸೂಜಿ ಮಲ್ಲಿಗೆಯನ್ನು ಬಳಸಿಕೊಳ್ಳಲಾಗಿದೆ. ಭಕ್ತಿ, ಭಾವ ಸೂಚಿಸಲು ಬಳಸುವ ಒಂದು ದೈವಿಕ ಜನಪದ ಗೀತೆಯನ್ನ ಹೀಗೇ ಕೊಲೆ ದೃಶ್ಯಕ್ಕೆ ಬಳಸಿಕೊಳ್ಳುವುದು ಸರಿಯೇ? ಜಾನಪದ ಅಂದ ತಕ್ಷಣ ಏನಕ್ಕೆ ಬೇಕಾದರೂ ಬಳಸಿಕೊಳ್ಳಬಹುದೇ? ಯಾರೂ ಕೇಳುವಂತಿಲ್ಲವೇ? ಯಾವ ಹಾಡನ್ನು ಯಾವ ಸನ್ನಿವೇಶಕ್ಕೆ ಬಳಸಿಕೊಳ್ಳಬೇಕೆಂಬ ಸಣ್ಣ ಪ್ರಜ್ಞೆಯು ಇರಲಿಲ್ಲವೇ? ಮಾರ್ಕೆಟ್ ಬೇರೆ ರೀತಿಯಲ್ಲೇ ಮಾಡಿಕೊಳ್ಳಬಹುದು. ಹೀಗಲ್ಲ. ಚಿತ್ರ ತಂಡ ಗಮನಿಸಬೇಕು’ ಎಂದು ಅವರು ಬರೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top