fbpx
ಸಮಾಚಾರ

ಚಹಾಲ್, ಕನ್ನಡಿಗರ ಕೈಬಿಟ್ಟು, ಕೊಹ್ಲಿ ಸೇರಿ ಮೂವರ ಉಳಿಸಿಕೊಂಡ RCB! ಐಪಿಎಲ್ ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ

ಐಪಿಎಲ್‌ನ 8 ಹಾಲಿ ತಂಡಗಳು ಆಟಗಾರರ ರಿಟೈನ್​ ಇಂದೇ ಕೊನೇ ದಿನವಾಗಿದ್ದು, ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಸಿದ್ಧವಾಗಿದ್ದು, ನೆನ್ನೆ ನಡೆದ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಆಟಗಾರರ ಹೆಸರುಗಳನ್ನು ಸಲ್ಲಿಸಲಾಗಿದೆ. . ಐಪಿಎಲ್ 2022ರ ಮೆಘಾ ಹರಾಜಿಗೂ(IPL AUCTION) ಮುನ್ನ ನಾಲ್ವರು ಆಟಗಾರರ ರಿಟೈನ್ ಮಾಡಿಕೊಳ್ಳುವ ಅವಕಾಶವಿದ್ದರೂ, ಆರ್‌ಸಿಬಿ ಮೂವರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ತಂಡದಲ್ಲಿ ಉಳಿಸಿಕೊಂಡಿದೆ.

ತಂಡಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ:
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ಎಂ ಎಸ್ ಧೋನಿ, ಋತುರಾಜ್ ಗಾಯಕ್ವಡ್, ಮೊಯೀನ್ ಅಲಿ
ಕೋಲ್ಕತಾ ನೈಟ್ ರೈಡರ್ಸ್: ಸುನೀಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್.
ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಉಮ್ರಾನ್ ಮಲಿಕ್, ಅಬ್ದುಲ್ ಸಮದ್,
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಕೀರಾನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್, ಮೊಹಮ್ಮದ್ ಸಿರಾಜ್.
ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಆನ್ರಿಕ್ ನೋರ್ಟಿಯಾ.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್
ಪಂಜಾಬ್ ಕಿಂಗ್ಸ್: ಮಯಂಕ್ ಅಗರ್ವಾಲ್, ಅರ್ಷ್​ದೀಪ್ ಸಿಂಗ್,

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top