fbpx
ಸಮಾಚಾರ

“ಅಪ್ಪುಗೆ ಆಸ್ತಿ, ಐಶ್ವರ್ಯ ಬೇಕಾದಷ್ಟು ಕೊಟ್ಟ ದೇವರು ‘ಆ 5 ನಿಮಿಷ’ ಮಾತ್ರ ಕೊಡಲಿಲ್ಲ” ರಾಘಣ್ಣ ಕಣ್ಣೀರು

ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಬರೋಬ್ಬರಿ ಒಂದು ತಿಂಗಳು ಕಳೆದುಹೋಗಿದೆ. ಗಟ್ಟಿಮುಟ್ಟಾಗಿದ್ದ ಆರೋಗ್ಯವಂತ ಅಪ್ಪು ಇದ್ದಕ್ಕಿಂತ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಇಡೀ ಕರ್ನಾಟಕಕ್ಕೆ ಸಿಡಿಲು ಬಡಿದಂತೆ ಬಡಿದಿತ್ತು. ಅಪ್ಪು ಆಗಲಿ ಒಂದು ತಿಂಗಳೇ ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಕಡಿಮೆಯಾಗಿಲ್ಲ.

ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಕೇಳಿದಾಗ ಬಹುತೇಕರಿಗೆ ಅದನ್ನು ನಂಬಲಿಕ್ಕೇ ಸಾಧ್ಯವಾಗಿರಲಿಲ್ಲ. ಈಗಲೂ ಅವರ ಸಾವನ್ನು ಒಂದು ಅಚ್ಚರಿ ಅಥವಾ ಅನುಮಾನದಿಂದಲೇ ನೋಡುವವರು ಹಲವರಿದ್ದಾರೆ. ಇವೆಲ್ಲದರ ನಡುವೆ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಅಪ್ಪು ಸಾವಿನ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಟಿವಿ ಅಸೋಸಿಯೇಷನ್ ಅವರು ಜಯನಗರದ ಹೆಚ್. ಎನ್. ಕಲಾಕ್ಷೇತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜಕುಮಾರ್ ಮಾತನಾಡುತ್ತ, ಅಪ್ಪು ಸಾವಿಗೆ ಕಾರಣ ಏನಿರಬಹುದು ಎಂದು ಹೇಳುವ ಜತೆಗೆ ಮುಂದೆ ಅಪ್ಪು ಥರ ಬೇರೆಯವರನ್ನು ಕಳೆದುಕೊಳ್ಳಬಾರದು ಎಂದರೆ ಏನು ಮಾಡಬೇಕು ಎಂಬ ಬಗ್ಗೆ ತಮ್ಮ ಚಿಂತನೆಯನ್ನು ಹೊರಹಾಕಿದ್ದಾರೆ.

“ನನಗೆ ದಿನವೂ ಕಾಡುತ್ತಿರುವ ಪ್ರಶ್ನೆಯೊಂದೇ ಎಂದ ರಾಘವೇಂದ್ರ ರಾಜ್ ಕುಮಾರ್, ಅಂದು ಅಪ್ಪುಗೆ ಏನು ಕಡಿಮೆಯಾಗಿತ್ತು ಹೇಳಿ, ಕೋಟ್ಯಂತರ ರೂಪಾಯಿ ಹಣವಿತ್ತು, ಬಂಗಲೆಯಿತ್ತು, ಐಷಾರಾಮಿ ಐದಾರು ಕಾರುಗಳಿದ್ದವು, ಜನರಿದ್ದರು, ಆದರೆ 46 ವರ್ಷದ ಜೊತೆಗೆ ಇನ್ನೊಂದು 5 ನಿಮಿಷ ಸಮಯವನ್ನು ದೇವರು ಹೆಚ್ಚು ಆತನಿಗೆ ಕೊಡುತ್ತಿದ್ದರೆ ಬದುಕುತ್ತಿದ್ದನೇನೋ?”

ಇಲ್ಲಿ ಯಾರನ್ನು ದೂರುವುದು, ಯಾರಲ್ಲಿ ಹೇಳಿಕೊಳ್ಳುವುದು, ಪಕ್ಕದ ಮನೆಯಲ್ಲಿ ನಾನಿದ್ದೆ. ವೈದ್ಯರಲ್ಲಿ ತಪಾಸಣೆ ಮಾಡಿಸಿ ವಿಕ್ರಂ ಆಸ್ಪತ್ರೆಗೆ ಹೋಗಬೇಕೆಂದಾಗ ಆಂಬ್ಯುಲೆನ್ಸ್ ಗೆ ಫೋನ್ ಮಾಡಿ ಕರೆಸಿದರೆ ತಡವಾಗುತ್ತದೆ ಎಂದು ನಮ್ಮದೇ ಕಾರಲ್ಲಿ ಕರೆದುಕೊಂಡು ಹೋದೆವು. ವಿಪರೀತ ಟ್ರಾಫಿಕ್. ಒಂದು ಕಾರಣದಿಂದ ಅಪ್ಪು ಜೀವ ಹೋಗಿದೆ. ಅಂದರೆ ಒಂದು ಬಲವಾದ ಕಾರಣದಿಂದ ಅವನು ಬಿಟ್ಟು ಹೋಗಿದ್ದಾನೆ. ಈಗ ನಾವು ಸರಿಹೋಗಬೇಕು. ಆಂಬ್ಯುಲೆನ್ಸ್ ಗೆ ಡಿಜಿಟಲ್ ಬೋರ್ಡ್ ಬರಬೇಕು. ಆಂಬ್ಯುಲೆನ್ಸ್ ಯಾವ ಆಸ್ಪತ್ರೆಗೆ ಹೋಗುತ್ತಿದೆ ಎಂದು ತೋರಿಸಬೇಕು. ಆಗ ಟ್ರಾಫಿಕ್ ಪೊಲೀಸ್ ಬೇರೆಯವರಿಗೆ ಸಂಚಾರವನ್ನು ತೆರವು ಮಾಡಿಕೊಡಬೇಕು. ಅಂತಹ ವ್ಯವಸ್ಥೆ ಮಾಡಿಕೊಟ್ಟರೆ ಅನೇಕ ಜೀವವನ್ನು ಉಳಿಸಬಹುದು ಎಂದು ಅಭಿಪ್ರಾಯಪಟ್ಟರು.

4 ನಿಮಿಷ ಬೇಗನೆ ಆಸ್ಪತ್ರೆಗೆ ಅಂದು ಅಪ್ಪು ತಲುಪುತ್ತಿದ್ದರೆ ಬದುಕುತ್ತಿದ್ದನೇನೋ, ಆಸ್ಪತ್ರೆಗೆ ಹೋಗುವ ರಸ್ತೆಗಳು ಅಗಲೀಕರಣವಾಗಬೇಕು, ಇಲ್ಲಿ ನಾನು ಸರ್ಕಾರದವರನ್ನು ದೂರುತ್ತಿಲ್ಲ, ನಮಗೇ ಜನರು ಮೊದಲು ಬದಲಾವಣೆಯಾಗಬೇಕು. ನಮ್ಮಲ್ಲಿ ಬದಲಾವಣೆ ಬಂದರೆ ನಂತರ ವ್ಯವಸ್ಥೆ ತನ್ನಿಂತಾನೇ ಬದಲಾಗುತ್ತದೆ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top