ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ಹೊಸ ತಳಿಯ ವಿರುದ್ಧ ಹೋರಾಡಲು ಭಾರತ ಆ ದೇಶಕ್ಕೆ ಸಹಾಯ ಮಾಡುತ್ತೆ ಅಂತ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.ದಕ್ಷಿಣ ಆಫ್ರಿಕಾಗೆ ಬೇಕಾಗುವ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳನ್ನ ನೀಡಲು ಭಾರತ ಸಿದ್ಧವಾಗಿದೆ ಅಂತ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪೀಟರ್ಸನ್, ಭಾರತ ಮತ್ತೊಮ್ಮೆ ತಾನು ದಯಾಮಾಯಿ, ಕರುಣಾಮಯಿ ಎಂಬುದನ್ನ ಸಾಬೀತುಪಡಿಸಿದೆ. ಈ ದೇಶದ ಜನರೆಲ್ಲಾ ಸಹೃದಯಿಗಳು, ವಿಶ್ವದಲ್ಲೇ ಅತ್ಯದ್ಭುತ ರಾಷ್ಟ್ರ ಅಂದ್ರೆ ಅದು ಭಾರತ. ಈ ಸಹಾಯಕ್ಕೆ ಧನ್ಯವಾದ ಅಂತ ಪ್ರಧಾನಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
