ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಬರೋಬ್ಬರಿ ಒಂದು ತಿಂಗಳು ಕಳೆದುಹೋಗಿದೆ. ಗಟ್ಟಿಮುಟ್ಟಾಗಿದ್ದ ಆರೋಗ್ಯವಂತ ಅಪ್ಪು ಇದ್ದಕ್ಕಿಂತ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಇಡೀ ಕರ್ನಾಟಕಕ್ಕೆ ಸಿಡಿಲು ಬಡಿದಂತೆ ಬಡಿದಿತ್ತು. ಅಪ್ಪು ಆಗಲಿ ಒಂದು ತಿಂಗಳೇ ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಕಡಿಮೆಯಾಗಿಲ್ಲ.
ಅಪ್ಪು ಅವರ ಅಮೋಘವಾದ ಕನಸಿನ ಪಯಣ. ಹಿಂದೆಂದೂ ಕಾಣದ ರೋಮಾಂಚಕ ಅನುಭವ.
Appu’s epic dream project. A cinematic experience like never before.
Title Teaser on 6th December in @PRKAudio. @PuneethRajkumar @amoghavarsha @AJANEESHB @PRK_Productions @PRKAudio #mudskipper pic.twitter.com/GTWAZkysCg
— Ashwini Puneeth Rajkumar (@ashwinipuneet) December 3, 2021
ಪುನೀತ್ ರಾಜ್ಕುಮಾರ್ ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಸಾಕಷ್ಟು ಭಿನ್ನ ಸಿನಿಮಾಗಳನ್ನು ನಿರ್ಮಾಣ ಮಾಡೋಕೆ ಪಣತೊಟ್ಟಿದ್ದರು. ಇದರ ಜತೆಗೆ ಕರ್ನಾಟಕದ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿದ್ದರು. ಇದರ ಟೈಟಲ್ ಟೀಸರ್ ಡಿಸೆಂಬರ್ 6ಕ್ಕೆ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಬಗ್ಗೆ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಘೋಷಣೆ ಮಾಡಿದ್ದಾರೆ.
ಶುಕ್ರವಾರ ಟ್ವೀಟ್ ಮಾಡಿರುವ ಅಶ್ವಿನಿ, ‘ಅಪ್ಪು ಅವರ ಅಮೋಘವಾದ ಕನಸಿನ ಪಯಣ. ಹಿಂದೆಂದೂ ಕಾಣದ ರೋಮಾಂಚಕ ಅನುಭವ. ಶೀರ್ಷಿಕೆ ಟೀಸರ್ ಡಿ.6ಕ್ಕೆ ಅನಾವರಣಗೊಳ್ಳಲಿದೆ’ ಎಂದಿದ್ದಾರೆ.
ಪಿಆರ್ಕೆ ಪ್ರೊಡಕ್ಷನ್ಸ್ನಡಿ, ರಾಷ್ಟ್ರಪ್ರಶಸ್ತಿ ವಿಜೇತ ‘ವೈಲ್ಡ್ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಜೆ.ಎಸ್. ಅವರ ಜೊತೆಗೂಡಿ ಪುನೀತ್ ‘ಗಂಧದ ಗುಡಿ’ ಹೆಸರಿನಲ್ಲಿ ಡಾಕ್ಯೂಫಿಲಂ ಒಂದನ್ನು ನಿರ್ಮಾಣ ಮಾಡಿದ್ದರು. ಕರ್ನಾಟಕದ ವನ್ಯಲೋಕ, ವನ್ಯಸಂಪತ್ತನ್ನು ಪರಿಚಯಿಸುವ ಈ ಸಾಕ್ಷ್ಯಚಿತ್ರದ ಟೀಸರ್ ನ.1ಕ್ಕೆ ಅನಾವರಣಗೊಳ್ಳಬೇಕಿತ್ತು. ಆದರೆ ಅಪ್ಪು ಅಕಾಲಿಕ ನಿಧನದಿಂದಾಗಿ ಇದು ಸಾಧ್ಯವಾಗಿರಲಿಲ್ಲ. ನಾಗರಹೊಳೆ, ಕಾಳಿನದಿ, ಹೊಸಪೇಟೆ ಸೇರಿದಂತೆ ಕರ್ನಾಟಕದ ಹಲವು ಜಾಗಗಳಲ್ಲಿ ಸುತ್ತಿ ಇದರ ಚಿತ್ರೀಕರಣ ನಡೆಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
