fbpx
ಸಮಾಚಾರ

ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಅಧಿಕಾರಿಗಳ ತಡೆ ಖಂಡಿಸಿ ಕತ್ತು ಕೊಯ್ದುಕೊಂಡ ಯುವಕ!

ಡಿ.6 ರಂದು ಅಂಬೇಡ್ಕರ್ ಪರಿನಿಬ್ಬಾಣ ದಿನದ ಅಂಗವಾಗಿ ಮಾತೃಮಂಡಳಿ ವೃತ್ತದಲ್ಲಿ ಶುಕ್ರವಾರ ತಡರಾತ್ರಿ ಕಂಚಿನ ಎಂಟು ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪನೆ ಮಾಡಿದ್ದರು. ಆದರೆ ಆ ವೃತ್ತದಲ್ಲಿ ರಾತ್ರೋ ರಾತ್ರಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿದ್ದನ್ನು ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನಲೆಯಲ್ಲಿ ಅಭಿಮಾನಿ ಸತೀಶ್ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ.

ಈ ಬೆಳವಣಿಗೆ ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ನಮಗೆ ಈ ಕೂಡಲೇ ಅಂಬೇಡ್ಕರ್ ಪ್ರತಿಮೆಯನ್ನು ವಾಪಸ್ ತಂದುಕೊಡಬೇಕು ಎಂದು ಪಟ್ಟು ಹಿಡಿದು ಪ್ರತಿಮೆ ನಿರ್ಮಾಣ ಮಾಡಿದ ಸ್ಥಳದಲ್ಲೇ ಧರಣಿ ಕುಳಿತರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ನೀವು ಪ್ರತಿಮೆ ನಿರ್ಮಾಣ ಮಾಡಿರುವ ಜಾಗದಲ್ಲೇ ಪ್ರತಿಮೆ ನಿರ್ಮಾಣ ಮಾಡಿಸುತ್ತೇನೆ.‌ ತಕ್ಷಣ ಪಾಲಿಕೆ ಅಧಿಕಾರಿಗಳಿಗರ ದೂರವಾಣಿ ಕರೆ ಮಾಡಿ ಅಂಬೇಡ್ಕರ್ ಪ್ರತಿಮೆಯನ್ನು ವಾಪಾಸ್ ತಂದುಕೊಡುವಂತೆ ಆದೇಶಿದ ನಂತರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತಂದುಕೊಟ್ಟಿದ್ದಾರೆ. ಈ ಪ್ರತಿಮೆಯನ್ನು ತೆರವು ಮಾಡಿರುವುದು ಸರಿಯಲ್ಲ‌ ಎಂದು ಪ್ರತಿಮೆಯನ್ನು ಪುನರ್ ಸ್ಥಾಪಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಉಗ್ರ ಪ್ರತಿಭಟನೆ ‌‌‌ನಡೆಸಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top