fbpx
ಸಮಾಚಾರ

ನಾಳೆ ನಟ ಶಿವರಾಮ್ ದರ್ಶನಕ್ಕೆ ಅವಕಾಶ: ಅಂತಿಮ ಸಂಸ್ಕಾರ ಎಲ್ಲಿ , ಎಷ್ಟು ಗಂಟೆಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕನ್ನಡದ ಹಿರಿಯ ನಟ ಶಿವರಾಂ ಅವರು ಡಿಸೆಂಬರ್ 4 ರಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಗಾಯಗೊಂಡು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ಚಿತ್ರರಂಗದ ಗಣ್ಯರು, ಒಡನಾಡಿಗಳು, ಅಭಿಮಾನಿಗಳೆಲ್ಲರಿಗೂ ಅಂತಿಮ ದರ್ಶನ ಪಡೆಯಲಿಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದ್ದು, ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಅವರ ಪಾರ್ಥಿವ ಶರೀರವನ್ನು ಇರಿಸಲಾಗವುದು. ಅಲ್ಲಿ ಎರಡು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

ಇನ್ನು ಶಿವರಾಮ ಅವರ ಅಂತಿಮ ಸಂಸ್ಕಾರ ಕೂಡ ನಾಳೆಯೇ ನಡೆಯಲಿದ್ದು ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top