fbpx
ಸಮಾಚಾರ

ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ; ಸಿಬ್ಬಂದಿಗೆ ತೀವ್ರ ಗಾಯ

ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತವಾಗಿದ್ದು, ಬೆಂಗಾವಲು ವಾಹನದ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಇದರಲ್ಲಿ ಒಬ್ಬರಿಗೆ ತೀವ್ರ ಗಾಯ ಆಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಾಹುತವಾಗಿಲ್ಲ. ಕಾಂಗ್ರೆಸ್​ ನಾಯಕರು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ್ದರು. ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಶಾಂತವೇರಿ ಘಾಟಿ ಮೂಲಕ ಶಿವಮೊಗ್ಗಕ್ಕೆ ಹೊರಟಿದ್ದರು. ಈ ವೇಳೆ ಡಿಕೆಶಿ ಕಾರು ತಾಲೂಕಿನ ಮಲ್ಲೇನಹಳ್ಳಿ ಬಳಿ ಹೋಗುವಾಗ ತೀವ್ರವಾದ ತಿರುವುಗಳ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಬೊಲೆರೋ ವಾಹನ ಕಾಫಿ ತೋಟದ ಒಳಗೆ ನುಗ್ಗಿದ್ದು, ಬೊಲೆರೋದಲ್ಲಿದ್ದ ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಗಾಯಗಳಾಗಿವೆ. ತಕ್ಷಣ ಸಿದ್ದರಾಮಯ್ಯ ಮತ್ತು ಡಿಕೆಶಿ ಗಾಯಾಳುಗಳ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top