fbpx
ಸಮಾಚಾರ

ಕೊನೆಗೂ ಅನೌನ್ಸ್ ಆಯ್ತು ವಿಕ್ರಾಂತ್ ರೋಣ ರಿಲೀಸ್ ಡೇಟ್

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ಟೀಸರ್, ವಿಭಿನ್ನ ಪೋಸ್ಟರ್ಗಳ ಮೂಲಕ ಗಮನ ಸೆಳೆದಿರುವ ‘ವಿಕ್ರಾಂತ್ ರೋಣ’ ಚಿತ್ರವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಮಾಡುವತ್ತ ಗಮನಹರಿಸಿದೆ. ಇದೀಗ ‘ವಿಕ್ರಾಂತ್ ರೋಣ’ ಚಿತ್ರವು ಅದ್ಧೂರಿಯಾಗಿ ತೆರೆಯ ಮೇಲೆ ಬರಲು ಸಜ್ಜಾಗಿದ್ದು, ಚಿತ್ರದ ರಿಲೀಸ್‌ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿಯನ್ನು ಹಂಚಿಕೊಂಡಿದೆ.

 

 

ವಿಕ್ರಾಂತ ರೋಣ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಘೋಷಿಸುವುದಾಗಿ ನಿರ್ದೇಶಕ ಅನೂಪ್ ಭಂಡಾರಿ ಅವರು ಮೊನ್ನೆ ತಾನೆ ಹೇಳಿದ್ದರು. ಅಂತೆಯೇ ಇಂದು ಚಿತ್ರದ ರಿಲೀಸ್ ಮಾಡಲಾಗಿದ್ದು 2022ರ ಫೆಬ್ರವರಿ 24ರಂದು ವಿಶ್ವದಾದ್ಯಂತ ಎಂದು ಘೋಷಿಸಿದ್ದಾರೆ.. ಸಾಮಾಜಿಕ ಜಾಲತಾಣದಲ್ಲಿ ನಟ ಸುದೀಪ್ ಅವರು ಸಣ್ಣ ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ವಿನೂತನವಾಗಿ ಪ್ರಕಟಿಸಲಾಗಿದೆ

‘ವಿಕ್ರಾಂತ್ ರೋಣ’ ಚಿತ್ರವು ‘3ಡಿ’ಯಲ್ಲಿ ತೆರೆಕಾಣಲಿದ್ದು, ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಹಿಂದೆ ಆಗಸ್ಟ್‌ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಚಿತ್ರ, ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ವಿಶೇಷವಾಗಿ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ಮೇಲೆ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್‌ ಬಿಡುಗಡೆಯಾಗಿ ಇಡೀ ವಿಶ್ವದ ಗಮನಸೆಳೆದಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top