fbpx
ಸಮಾಚಾರ

ಸೇನಾ ಹೆಲಿಕಾಪ್ಟರ್ ಪತನ: 4 ಮೃತದೇಹ ಪತ್ತೆ– ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಘಟನಾ ಸ್ಥಳದಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ.

14 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ಕನಿಷ್ಠ ಆರು ಆಂಬ್ಯುಲೆನ್ಸ್ ತಂಡಗಳನ್ನು ಕಳಿಸಲಾಗಿದೆ. ಆಸ್ಪತ್ರೆಗೆ ಕಳುಹಿಸಲಾದ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನೀಲ್‌ಗಿರಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದ್ದು ವಿಮಾನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.

ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

ಹವಮಾನ ವೈಪರೀತ್ಯ ಹಿನ್ನೆಲೆ ಇಂಜಿನ್ ನಿಷ್ಕ್ರಿಯಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ದುರಂತ ಎಷ್ಟು ತೀವ್ರವಾಗಿತ್ತು ಎಂದರೆ ಹೆಲಿಕಾಪ್ಟರ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಊಟಿ ಸ್ಟಾಫ್ ಕಾಲೇಜಿನಲ್ಲಿ ಸಿಡಿಎಸ್ ರಾವತ್ ಉಪನ್ಯಾಸ ಕಾರ್ಯಕ್ರಮವಿತ್ತು. ಇಲ್ಲಿಂದ ಸೂರೂರಿಗೆ ಹೋಗಿ ಅಲ್ಲಿಂದ ದೆಹಲಿಗೆ ಮರಳಬೇಕಿತ್ತು. ಸಿಡಿಎಸ್ ಜನರಲ್ ಬಿಪಿನ್ ರಾವತ್ ಕೂಡ ಹೆಲಿಕಾಪ್ಟರ್‌ನಲ್ಲಿದ್ದರು. ಯಾರನ್ನೆಲ್ಲಾ ಈವರೆಗೆ ರಕ್ಷಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಹೆಲಿಕಾಪ್ಟರ್‌ನಲ್ಲಿ ಜನರಲ್ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top