fbpx
ಸಮಾಚಾರ

”ಪುನೀತ್​ ಅಣ್ಣನ ಕಳೆದುಕೊಂಡು ನಾವು ತಬ್ಬಲಿ ಆಗಿದ್ದೇವೆ” ಪುನೀತ್ ಜೊತೆ ಕಳೆದ ಕ್ಷಣ ನೆನೆದು ನಿಖಿಲ್ ಭಾವುಕ

ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೈಹಿಕವಾಗಿ ನಮ್ಮಿಂದ ದೂರವಾಗಿ ಬರೋಬ್ಬರಿ ಒಂದು ತಿಂಗಳು ಕಳೆದುಹೋಗಿದೆ. ಗಟ್ಟಿಮುಟ್ಟಾಗಿದ್ದ ಆರೋಗ್ಯವಂತ ಅಪ್ಪು ಇದ್ದಕ್ಕಿಂತ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಇಡೀ ಕರ್ನಾಟಕಕ್ಕೆ ಸಿಡಿಲು ಬಡಿದಂತೆ ಬಡಿದಿತ್ತು. ಅಪ್ಪು ಆಗಲಿ ಒಂದು ತಿಂಗಳೇ ಕಳೆದಿದ್ದರೂ ಅದರಿಂದ ಕನ್ನಡಿಗರ ಮನಸ್ಸಿಗೆ ಆಗಿರುವ ನೋವಿನ ಪ್ರಮಾಣ ಕಡಿಮೆಯಾಗಿಲ್ಲ.

ಪುನೀತ್​ ರಾಜ್​ಕುಮಾರ್ ಅವರು ಅಭಿಮಾನಿಗಳಿಗೆ ಮಾತ್ರವಲ್ಲದೇ ಚಿತ್ರರಂಗದಲ್ಲಿನ ಅನೇಕ ಯುವ ನಟರಿಗೆ ಸ್ಪೂರ್ತಿಯಾಗಿದ್ದರು. ಅವರಿಂದ ಸ್ಫೂರ್ತಿ ಪಡೆದವರಲ್ಲಿ ನಿಖಿಲ್​ ಕುಮಾರಸ್ವಾಮಿ ಕೂಡ ಒಬ್ಬರು. ನಿಖಿಲ್​ ನಟನೆಯ ‘ರೈಡರ್​’ ಚಿತ್ರದ ಸುದ್ದಿಗೋಷ್ಠಿ ನೆನ್ನೆ ನಡೆಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್​ ಅವರು ಪುನೀತ್​ ರಾಜ್​​ಕುಮಾರ್​ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು.

‘ಇಡೀ ದೇಶದಲ್ಲಿ ಇಂದು ಪುನೀತ್​ ಅಣ್ಣನ ಬಗ್ಗೆ ಚರ್ಚೆ ನಡೆಯುತ್ತಿದೆ. ಹಳ್ಳಿಹಳ್ಳಿಯಲ್ಲೂ ಅವರ ಭಾವಚಿತ್ರಗಳನ್ನು ಹಾಕಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ನಾವೆಲ್ಲ ತಬ್ಬಲಿಗಳಾಗಿದ್ದೇವೆ. ಯಾರಿಗೂ ಗೊತ್ತಾಗದ ರೀತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ ಅಪ್ಪು ಅವರು ಎಲ್ಲರಿಗೂ ಒಂದು ಪಾಠ ಹೇಳಿಕೊಟ್ಟಿದ್ದಾರೆ” ಎಂದು ನಿಖಿಲ್​ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top