fbpx
ಸಮಾಚಾರ

ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಶೋಭಾ ವಿರೋಧ: ಅಷ್ಟಕ್ಕೂ ಸಚಿವೆ ಹೇಳಿದ್ದೇನು?

ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರೀ ಶಾಲೆಗಳಲ್ಲಿ ನೀಡುವ ಕೋಳಿ ಮೊಟ್ಟೆಯ ಬಗ್ಗೆ ಕೆಲ ಮಠಗಳ ಸ್ವಾಮೀಜಿಗಳು ತಗಾದೆ ತೆಗೆದಿದ್ದು ಮೊಟ್ಟೆಯನ್ನು ನೀಡಬಾರದು ಎಂದು ಪ್ರತಿಭಟಿಸುತ್ತಿದ್ದಾರೆ. ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ರಾಷ್ಟ್ರೀಯ ಲಿಂಗಾಯತ ಧರ್ಮ, ಮಹಾ ಸಭಾ ಬಸವ ಮಂಟಪದ ಜಗದ್ಗುರುಗಳು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು. ಶಾಲೆಯಲ್ಲಿ ಮೊಟ್ಟೆ ಕೊಡುವುದರಿಂದ ಸಸ್ಯಹಾರಿ, ಮಾಂಸಹಾರಿ ಎಂಬ 2 ಗುಂಪು ರಚನೆಯಾಗತ್ತೆ. ಹೀಗಾಗಿ ಸರ್ಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ:
ಈ ಬಗ್ಗೆ ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಮೊಟ್ಟೆ ನೀಡುವ ಪ್ರಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಮೊಟ್ಟೆ ಬದಲು ಮಕ್ಕಳ ತಾಯಿ ಕೈಗೆ ದುಡ್ಡು ಕೊಡುವುದು ಒಳ್ಳೆಯದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಕ್ಕಳ‌ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ‌ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ‌ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top