fbpx
ಸಮಾಚಾರ

ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಏನದು?

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಜಾನರ್ ಚಿತ್ರಗಳಲ್ಲಿ ಅಭಿನಯಿಸುತ್ತಲೇ ಎತ್ತರೆತ್ತರಕ್ಕೆ ಬೆಳೆಯುತ್ತಿರುವವರು ಸಿಂಪಲ್ ಹುಡುಗ ರಕ್ಷಿತ್ ಶೆಟ್ಟಿ.. ಮಾಸ್, ಕಮರ್ಷಿಯಲ್ ಸಿನಿಮಾಗಳಿಗಿಂತ ಸದಭಿರುಚಿ ಚಿತ್ರಗಳಲ್ಲೇ ಹೆಚ್ಚು ನಟಿಸುವ ರಕ್ಷಿತ್ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಎರಡು ವರ್ಷದ ಹಿಂದೆ ಅವನೇ ಶ್ರೀಮನ್ನಾರಾಯಣ ಚಿತ್ರ ಬಂದಿದ್ದು ಬಿಟ್ಟರೆ ಮತ್ತೆ ಅವರ ಯಾವುದೇ ಚಿತ್ರ ಕೂಡ ತೆರೆಗೆ ಬಂದಿಲ್ಲ. ಅವರನ್ನು ತೆರೆ ಮೇಲೆ ಮತ್ತೆ ಯಾವಾಗ ನೋಡೋದು ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಹಾಗೆ ಕಾದು ಕುಳಿತಿದ್ದ ಅವರ ಹಾರ್ಡ್ ಕೋರ್ ಅಭಿಮಾನಿಗಳಿಗೆ ಇದು ಬ್ಯಾಡ್ ನ್ಯೂಸ್.

 

 

ಹೌದು, ಸದ್ಯ ಚಾರ್ಲಿ ೭೭೭ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಲ್ಲೀನರಾಗಿರುವ ರಕ್ಷಿತ್ಈ ವರ್ಷಾಂತ್ಯಕ್ಕೆ ತೆರೆಗೆ ತರಲು ಯತ್ನಿಸಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಮೊದಲೇ ಹೇಳಿದಂತೆ ಡಿಸೆಂಬರ್ ಕೊನೆ ವಾರದಲ್ಲಿ ರಿಲೀಸ್ ಆಗಬೇಕಿತ್ತು,. ಆದರೆ ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಿಲ್ಲ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಅವರೇ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ..

ರಕ್ಷಿತ್ ಟ್ವೀಟ್ ಈ ರೀತಿ ಇದೆ:
‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗೂ ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಸೋಷಿಯಲ್ ಮೀಡಿಯಾ ಮೂಲಕ ರಕ್ಷಿತ್ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.

ಈ ಮೂಲಕ ಚಾರ್ಲಿ ಚಿತ್ರತಂಡ ತಮ್ಮ ಚಿತ್ರ ಬಿಡುಗಡೆಯನ್ನು ಮುಂದೂಡಿದ್ದು ಶೀಘ್ರದಲ್ಲೇ ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆಯಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top