fbpx
ಸಮಾಚಾರ

ಕುವೆಂಪು ಸೊಸೆ, ಪೂರ್ಣಚಂದ್ರ ತೇಜಸ್ವಿ ಪತ್ನಿ ನಿಧನ

ರಾಷ್ಟಕವಿ ಕುವೆಂಪು ಅವರ ಸೊಸೆ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ‌ ರಾಜೇಶ್ವರಿ ತೇಜಸ್ವಿ‌ ಮಂಗಳವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿ‌ಸ್ಪೆಷಾಲಿಟಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,. ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 6.20ಕ್ಕೆ ಸಾವನ್ನಪ್ಪಿದ್ದಾರೆ.

ರಾಜೇಶ್ವರಿ ಅವರು ಮೂಡಿಗೆರೆಯ ಹ್ಯಾಂಡ್‌ ಪೋಸ್ಟ್‌ನಲ್ಲಿ ವಾಸವಾಗಿದ್ದರು. ಪತಿ ಪೂರ್ಣಚಂದ್ರ ತೇಜಸ್ವಿಯವರ ನಿಧನದ ಬಳಿಕ ತೋಟದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ರಾಜೇಶ್ವರಿ ಅವರು ಬೆಂಗಳೂರಿಗೆ ಬಂದಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಹಾಗೂ ರಾಜೇಶ್ವರಿ ದಂಪತಿಯ ಮಗಳಾದ ಸುಷ್ಮಿತಾ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು(ಡಿ.14) ಸಂಜೆ 5.30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಜೇಶ್ವರಿ ತೇಜಸ್ವಿ ಅವರು 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. 1966ರಲ್ಲಿ ಪೂರ್ಣಚಂದ್ರ ತೇಜಸ್ವಿರನ್ನು ವಿವಾಹವಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top