fbpx
ಸಮಾಚಾರ

ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಧ್ವಂಸ: ನಟ ದರ್ಶನ್‌ ಆಕ್ರೋಶ

ಮಹಾರಾಷ್ಟ್ರದ ಎಂಇಎಸ್‌ ಪೋಲಿಗಳು ಇತ್ತೀಚಿಗೆ MES ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕನ್ನಡಿಗರ ತಾಳ್ಮೆಯನ್ನು ಕದಡಿದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಇಂತಹದೇ ಘಟನೆ ಪುನರಾವರ್ತಿಸಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಶುಕ್ರವಾರ ರಾತ್ರಿ ವಿರೂಪಗೊಳಿಸಿದ್ದು, ಇದರಿಂದ ಸ್ವಾಭಿಮಾನಿ ಕನ್ನಡಿಗರ ಭಾವನೆಗೆ ದಕ್ಕೆ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಕಿಡಿಕಾರಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

 

 

‘ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಲಾಗಿದೆ. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.’ ಎಂದು ನಟ ದರ್ಶನ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಏನಿದು ಘಟನೆ?
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವುದು ಬೆಳಕಿಗೆ ಬರುತ್ತಿದ್ದಂತೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಇಂದು ಬೆಳಗ್ಗೆ 8 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೂ ಬೆಳಗಾವಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ವಿಧಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top