fbpx
ಸಮಾಚಾರ

ಅಧಿಕಾರದ ಬಗ್ಗೆ ಮುಖ್ಯಮಂತ್ರಿ ಭಾವನಾತ್ಮಕ ಹೇಳಿಕೆ ತಪ್ಪೇನಿಲ್ಲ: ಎಚ್‌ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಆದರೆ ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಹಾಗೆಯೇ ಮುಖ್ಯಮಂತ್ರಿ ಬದಲಾವಣೆ ಆಗುತ್ತೆ ಅಂತ ಬೊಮ್ಮಾಯಿ ಅವರು ಹೀಗೆ ಮಾತನಾಡಿದ್ದಾರೆ ಎನ್ನುವುದನ್ನು ನಾನು ಒಪ್ಪಲು ತಯಾರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top