fbpx
ಸಮಾಚಾರ

ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಸಂಸದನಿಗೆ ಸೋಂಕು ದೃಢ

ಸೋಮವಾರ ಲೋಕಸಭಾ ಕಲಾಪದಲ್ಲಿ ಭಾಗವಹಿಸಿದ್ದ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಕೋವಿಡ್ ದೃಢಪಟ್ಟಿದೆ. ಎರಡೂ ಡೋಸ್ ಲಸಿಕೆ ಪಡೆದಿರುವ ಸಂಸದರಿಗೆ ಸೌಮ್ಯ ರೋಗಲಕ್ಷಣಗಳಿವೆ. ಈ ಬಗ್ಗೆ ಮಂಗಳವಾರ ಅಲಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಹೊರತಾಗಿ ಸೋಂಕು ದೃಢಪಟ್ಟಿದೆ. ಸೋಮವಾರ ಕಲಾಪದಲ್ಲಿ ಭಾಗಿಯಾಗಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕ್ವಾರಂಟೈನ್‍ಗೆ ಒಳಗಾಗಿ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್ 23ಕ್ಕೆ ಸಂಸತ್ತಿನ ಚಳಿಗಾಲದ ಅಧಿವೇಶನ ಅಂತ್ಯವಾಗುತ್ತಿದೆ. ಅದಕ್ಕೂ ಮುನ್ನವೇ ಒಬ್ಬ ಸಂಸದರಿಗೆ ಕೋವಿಡ್ ದೃಢಪಟ್ಟಿದ್ದು, ಇತರೆ ಸಂಸದರಿಗೆ ಆತಂಕ ಮೂಡಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top