fbpx
ಸಮಾಚಾರ

23 ವರ್ಷಗಳ ಕ್ರಿಕೆಟ್ ಜೀವನಕ್ಕೆ ಹರ್ಭಜನ್ ಸಿಂಗ್ ವಿದಾಯ;

ಟೀಂ ಇಂಡಿಯಾದ ದಿಗ್ಗಜ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 1998ರಲ್ಲಿ ಕೇವಲ 17ನೇ ವಯಸ್ಸಿನಲ್ಲಿ ಕ್ರಿಕೆಟ್ ವೃತ್ತಿಗೆ ಹರ್ಭಜನ್ ಸಿಂಗ್ ಪಾದಾರ್ಪಣೆ ಮಾಡಿದ್ದರು. ಈಗ 23 ವರ್ಷಗಳ ನಂತರ ಅವರು ಕ್ರಿಕೆಟ್‌ಗೆ ಶಾಶ್ವತವಾಗಿ ವಿದಾಯ ಹೇಳಿದ್ದಾರೆ.

 

 

ಈಗ 23 ವರ್ಷಗಳ ನಂತರ ಅವರು ಕ್ರಿಕೆಟ್‌ಗೆ ಶಾಶ್ವತವಾಗಿ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಹರ್ಭಜನ್ ಸಿಂಗ್ ಕೇವಲ 17ನೇ ವಯಸ್ಸಿನಲ್ಲಿ ಕ್ರಿಕೆಟ್ ಆರಂಭಿಸಿದ್ದು, ಇಂದು 41ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹರ್ಭಜನ್ ಸಿಂಗ್ ಅವರು 1998 ರಲ್ಲಿ ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ತಮ್ಮ ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಇದರ ನಂತರ ಅವರು ಅದೇ ವರ್ಷದಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ODI ಚೊಚ್ಚಲ ಪಂದ್ಯವನ್ನು ಆಡಿದರು. ನಂತರ ಅವರು 2006 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ T20 ಗೆ ಪಾದಾರ್ಪಣೆ ಮಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಭಜ್ಜಿ, “ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳುತ್ತದೆ. ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ, ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯವಾಗಿ ಮಾಡಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top