ಸದ್ಯ ದೇಶದಲ್ಲಿ ಪೆಟ್ರೋಲ್ ದರ ಲೀಟರ್ಗೆ 100 ರೂಪಾಯಿ ಇದೆ. ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದ ಮೇಲೆ ಹಲವು ರಾಜ್ಯಗಳೂ ಸಹ ವ್ಯಾಟ್ ಕಡಿತಗೊಳಿಸಿದ್ದವು. ಆದರೆ ಇದೀಗ ಜಾರ್ಖಂಡ ಸರ್ಕಾರ ಒಂದು ಮಹತ್ವದ ಘೋಷಣೆ ಮಾಡಿದೆ. ಪೆಟ್ರೋಲ್ ಬೆಲೆಯಲ್ಲಿ 25 ರೂಪಾಯಿ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಇಂದು ಘೋಷಿಸಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ.
ಮುಂದಿನ ಜನವರಿ 26 ರಿಂದ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 25 ರೂಪಾಯಿ ಕಡಿಮೆಯಾಗಲಿದೆ ಎಂದು ಹೇಳಿದ್ದು, ಆದರೆ ಕಡಿಮೆ ಬೆಲೆಗೆ ಪೆಟ್ರೋಲ್ ಖರೀದಿ ಮಾಡಬೇಕಾದಲ್ಲಿ ಗ್ರಾಹಕರಿಗೂ ಕೂಡ ಒಂದು ಷರತ್ತನ್ನು ವಿಧಿಸಲಾಗಿದೆ. ಹೌದು, 25 ರೂಪಾಯಿ ಕಡಿಮೆ ಬೆಲೆಯ ಪೆಟ್ರೋಲ್ ಎಲ್ಲರಿಗೂ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ವ್ಯಕ್ತಿಗಳಿಗೆ ಮಾತ್ರವೇ ಕಡಿಮೆ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಸಿಗಲಿದೆ.
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರ ಏರಿಕೆಯಿಂದ ಕೆಳ ಮತ್ತು ಮಧ್ಯಮ ಆದಾಯ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಮಟ್ಟದಲ್ಲಿ ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 25 ರೂಪಾಯಿ ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
