fbpx
ಸಮಾಚಾರ

ಕಂದಾಯ ಇಲಾಖೆ ನೇಮಕಾತಿ: 3000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 3,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು ಕರ್ನಾಟಕದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 21,2022ರ ಸಂಜೆ 5 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಪದವಿ ಪೂರ್ವ ಶಿಕ್ಷಣ (ಪಿಯುಸಿ) ಅಥವ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ನಡೆಸುವ 12ನೇ ತರಗತಿ ಸಿ.ಬಿ.ಎಸ್.ಇ ಅಥವ ಐ.ಸಿ.ಎಸ್.ಇ ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇ 60ಕ್ಕಿಂತ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ನಾಡ ಕಚೇರಿಗಳಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್‌ ನೀಡಿ ₹ 1000 ಶುಲ್ಕ ಪಾವತಿಸಿ, ವಿಶಿಷ್ಟ ಅರ್ಜಿ ಸಂಖ್ಯೆ ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು, ಈ ಸಂಖ್ಯೆ ಇಲ್ಲದಿದ್ದರೆ ಆನ್‌ಲೈನ್‌ ಅರ್ಜಿ ತೆರೆಯುವುದಿಲ್ಲ.

ಆಯ್ಕೆ ಹೇಗೆ?
ಭೂಮಾಪಕನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ಧಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ ಜನವರಿ ಅಥವಾ ಫೆಬ್ರವರಿ 2022 ರಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯ ದಿನಾಂಕವನ್ನು ವೆಬ್‌ಸೈಟ್‌ rdservices.karnataka.gov.in ರಲ್ಲಿ ಮತ್ತು ದಿನಪತ್ರಿಕೆಗಳಲ್ಲಿ 15 ದಿನ ಮುಂಚಿತವಾಗಿ ಪ್ರಕಟಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
– ವೆಬ್‌ಸೈಟ್‌ rdservices.karnataka.gov.in ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ ಹೊರತುಪಡಿಸಿ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅಧಿಸೂಚನೆ ಲಿಂಕ್‌:

Click to access LS%20NOTIFICATION-%2001-12-2021.pdf

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top