fbpx
ಸಮಾಚಾರ

ಕನ್ನಡಿಗನಿಗೆ ಒಲಿದ ಟೀಮ್ ಇಂಡಿಯಾ ನಾಯಕತ್ವ: ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕೆಎಲ್ ರಾಹುಲ್ ನಾಯಕ

ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಬಳಿಕ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 18 ಆಟಗಾರರ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನ ನಾಯಕರನ್ನಾಗಿ ಆಯ್ಕೆ ಮಾಡಿದೆ. ಹಾಗೆಯೇ ಜಸ್​ಪ್ರೀತ್ ಬುಮ್ರಾ ಅವರಿಗೆ ಉಪನಾಯಕತ್ವ ಕೊಟ್ಟಿರುವುದು ಗಮನಾರ್ಹ.

ಮಂಡಿರಚ್ಚು ಗಾಯದ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದು, ಅವರು ಗುಣಮುಖರಾಗಲು ಕೆಲವು ದಿನಗಳ ಅಗತ್ಯವಿದೆ. ಇತ್ತೀಚಿಗೆ ಟಿ-20 ಮತ್ತು ಏಕದಿನ ಪಂದ್ಯಗಳ ಉಪನಾಯಕನ್ನಾಗಿ ನೇಮಕ ಮಾಡಲಾಗಿದ್ದ ರಾಹುಲ್ ಅವರು ಏಕದಿನ ಪಂದ್ಯಗಳಲ್ಲೂ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ.

ಇನ್ನು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2017ರ ಬಳಿಕ ಮೊದಲ ಬಾರಿಗೆ ಭಾರತ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಐಪಿಎಲ್ ಸೇರಿದಂತೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಗಮನಸೆಳೆದಿರುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ( Ruturaj Gaikwad) ಹಾಗೂ ಆಲ್ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಟೀಂ ಇಂಡಿಯಾ ತಂಡ ಇಂತಿದೆ:
ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್, ಋತುರಾಜ್ ಗಾಯಕ್ ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಾಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್) ಇಶಾನ್ ಕಿಶಾನ್ ( ವಿಕೆಟ್ ಕೀಪರ್) ವೈ ಚಹಾಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಬೂಮ್ರಾ ( ಉಪ ನಾಯಕ) ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top