ಕೋವಿಡ್ ಜಗತ್ತಿನಾದ್ಯಂತ ಮತ್ತೊಮ್ಮೆ ಆತಂಕ ಸೃಷ್ಟಿಸುವ ಮಟ್ಟಕ್ಕೆ ತಲುಪಿದೆ. ಕೋವಿಡ್ ಮೊದಲ ಮತ್ತು ಎರಡನೆಯ ಅಲೆಯ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ದೇಶಕ್ಕೆ ಮೂರನೇ ಅಲೆ ಕಾಲಿಟ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ರಾಜಕೀಯ ಗಣ್ಯರು ಸೇರಿದಂತೆ ಸಿನಿಮಾ ಮಂದಿ ಇತ್ತೀಚಿಗೆ ಕೊರೋನಾಗೆ ತುತ್ತಾಗಿರುವುದು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ.
ಇತ್ತೀಚೆಗಷ್ಟೇ ಕರೀನಾ ಕಪೂರ್,ಅರ್ಜುನ್ ಕಪೂರ್, ಕಮಲ್ ಹಾಸನ್ ಸೇರಿದಂತೆ ಹಲವರಿಗೆ ಕೊವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಇಂದು ಮತ್ತೆ ಮೂವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕಿರುತೆರೆ ಹಾಗೂ ಹಿರಿತೆರೆ ನಿರ್ಮಾಪಕಿ ಏಕ್ತಾ ಕಪೂರ್, ಖ್ಯಾತ ನಟ ಜಾನ್ ಅಬ್ರಹಾಂ, ನಟಿ ನೋರಾ ಫತೇಹಿ ಅವರಿಗೂ ಕೊರೋನಾ ಸೋಂಕು ಅಂಟಿದೆ.
ತಮಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರವನ್ನು ನಿರ್ಮಾಪಕಿ ಏಕ್ತಾ ಕಪೂರ್, ಖ್ಯಾತ ನಟ ಜಾನ್ ಅಬ್ರಹಾಂ, ನಟಿ ನೋರಾ ಫತೇಹಿ ಮೂರು ಜನ ಖಚಿತ ಪಡಿಸಿದ್ದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ಜೊತೆ ಸದ್ಯ ಮೂವರು ಅವರವರ ಮನೆಯಲ್ಲಿಯೇ ಸ್ವಯಂ ಕ್ವಾರಂಟೈನ್ ಆಗಿದ್ದು ಅವರ ಜೊತೆ ಸಂಪರ್ಕಕ್ಕೆ ಬಂದವರನ್ನು ಟೆಸ್ಟ್ ಮಾಡಿಸಿ, ಎಚ್ಚರಿಕೆಯಿಂದಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
