ಟಾಲಿವುಡ್ ನಟ ಮಹೇಶ್ ಬಾಬು ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹಾಗಂತ ಅವರು ಇದ್ದಕ್ಕಿಂತ ಏನಾದ್ರೂ ಗಂಭೀರ ಕಾಯಿಲೆಗೆ ಒಳಗಾದರೆ ಎಂದು ಯೋಚಿಸಬೇಡಿ. ಅವರಿಗೆ ಗಾಬರಿ ಪಡುವಂತ ತೊಂದರೆಯೇನಾಗಿಲ್ಲ. ಬದಲಾಗಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಅಷ್ಟೇ.. ಅವರಿಗೆ ಸೌಮ್ಯ ಲಕ್ಷಣಗಳು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ.
ಟ್ವೀಟ್ ಮೂಲಕ ಮಾಹಿತಿ ನೀಡಿದ ನಟ, ‘ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಣ್ಣಪುಟ್ಟ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಸ್ತುತ ಹೋಂ ಐಸೋಲೇಷನ್ನಲ್ಲಿದ್ದು, ಕೆಲವು ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿರುವ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಿ ಮತ್ತು ಜಾಗರೂಕರಾಗಿರಿ. ಇನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ’ ಎಂದು ಮಹೇಶ್ ಬಾಬು ಮನವಿ ಮಾಡಿಕೊಂಡಿದ್ದಾರೆ.
ಅಂದಹಾಗೆ ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗಿವೆ. ಮೂರನೇ ಅಲೆಯ ಆತಂಕದಲ್ಲಿ ಅನೇಕ ರಾಜ್ಯಗಳು ಈಗಾಗಲೇ ಕೆಲವು ಕೋವಿಡ್ ನಿರ್ಬಂಧಗಳನ್ನ ಹೇರಿವೆ. ಈ ಮದ್ಯೆ ಸೆಲೆಬ್ರೆಟಿಗಳು ಕೂಡ ಕೋವಿಡ್ ಸೋಂಕಿಗೆ ತುತ್ತಾಗುತ್ತಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಮಹೇಶ್ ಬಾಬು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕವಾಗಿ ಹಾರೈಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
