fbpx
ಸಮಾಚಾರ

ಲೈಂಗಿಕ ಕಿರುಕುಳ ಪ್ರಕರಣ; ಐದು ವರ್ಷಗಳ ಬಳಿಕ ಘಟನೆ ಬಗ್ಗೆ ಮೌನ ಮುರಿದ ನಟಿ ಭಾವನಾ ಮೆನನ್​

ಬಹುಭಾಷಾ ನಟಿ ಭಾವನಾ ಮೆನನ್ ಅವರಿಗೆ ಸುಮಾರು ಐದು ವರ್ಷಗಳ ಹಿಂದೆ ಲೈಂಗಿಕ ಕಿರುಕುಳ ನೀಡಲಾಗಿತ್ತು. 2017ರ ಫೆಬ್ರವರಿ ತಿಂಗಳಿನಲ್ಲಿ ಭಾವನಾ ಶೂಟಿಂಗ್ ಮುಗಿಸಿ ಕೇರಳದ ತ್ರಿಶೂರ್‌ನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದರು. ಇದೆ ವೇಳೆ ಅವರನ್ನು ಕಿಡಿಗೇಡಿಗಳ ಗುಂಪೊಂದು ಅಪಹರಿಸಿ ಎರಡು ಗಂಟೆಗಳ ಕಾಲ ಕಾರಿನಲ್ಲಿಯೇ ಕಿರುಕುಳ ನೀಡಿತ್ತು. ಈ ಘಟನೆ ನಡೆದು ಐದು ವರ್ಷ ಕಳೆದಿದ್ದು ಇದೀಗ ಭಾವನಾ ಆ ಘಟನೆ ಬಗ್ಗೆ ಮೌನ ಮುರಿದಿದ್ದಾರೆ. 5 ವರ್ಷಗಳ ಹಿಂದಿನ ಕಹಿ ನೆನಪನ್ನು ನೆನೆದು ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

 

 

ನಟಿ ಭಾವನಾ ಮೆನನ್​ ಪೋಸ್ಟ್​ನಲ್ಲಿ ಏನಿದೆ?
‘ಇದು ಸುಲಭದ ಪ್ರಯಾಣವಾಗಿರಲಿಲ್ಲ. ಬಲಿಪಶು ಆಗಿ ನಂತರ ಬದುಕುಳಿಯುವವರೆಗಿನ ಪ್ರಯಾಣ ಇದಾಗಿತ್ತು. ನಾನು ಅಪರಾಧ ಎಸಗಿದವಳಲ್ಲ. ಆದರೂ, ನನ್ನನ್ನು ಅವಮಾನಿಸುವ, ನನ್ನ ಧ್ವನಿಯನ್ನು ಅಡಗಿಸುವ ಅನೇಕ ಪ್ರಯತ್ನಗಳು ನಡೆದಿವೆ. ಆದರೆ ಅಂತಹ ಸಮಯದಲ್ಲಿ ನನ್ನ ಧ್ವನಿಯನ್ನು ಜೀವಂತವಾಗಿಡಲು ಕೆಲವರು ಮುಂದಾದರು. ಈಗ ಅನೇಕ ಧ್ವನಿಗಳು ನನ್ನ ಪರವಾಗಿ ಮಾತನಾಡುತ್ತಿವೆ. ಇದನ್ನು ನೋಡಿದಾಗ ನ್ಯಾಯಕ್ಕಾಗಿ ಈ ಹೋರಾಟದಲ್ಲಿ ನಾನು ಒಬ್ಬಂಟಿಯಾಗಿಲ್ಲ ಎಂದು ನನಗೆ ಮನವರಿಕೆಯಾಗಿದೆ. ನ್ಯಾಯವು ಮೇಲುಗೈ ಸಾಧಿಸಲು, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲು, ಯಾರೂ ಮುಂದೆ ಇಂತಹ ಅಗ್ನಿಪರೀಕ್ಷೆಗೆ ಒಳಗಾಗದಂತೆ ನೋಡಿಕೊಳ್ಳಲು, ನಾನು ಈ ಪ್ರಯಾಣವನ್ನು ಮುಂದುವರಿಸುತ್ತೇನೆ. ನನ್ನೊಂದಿಗೆ ನಿಂತಿರುವವರಿಗೆ, ನಿಮ್ಮ ಪ್ರೀತಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಯಾರ ಹೆಸರನ್ನು ಹೇಳದೇ ತಮಾಗದ ಕಹಿ ಘಟನೆಯನ್ನು ನೆನೆದು ಭಾವನಾ ಪೋಸ್ಟ್​ ಮಾಡಿದ್ದಾರೆ.

 

ಅಂದಹಾಗೆ ಭಾವನಾ ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲೇ ಹೆಚ್ಚು ಕಾಲ ಕಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಚಿತ್ರಗಳಲ್ಲಿ ಭಾವನಾ ನಟಿಸಿದ್ದಾರೆ. ಜಾಕಿ, ವಿಷ್ಣುವರ್ಧನ, ಬಚ್ಚನ್, ಟೋಪಿವಾಲ, ಟಗರು, ಭಜರಂಗಿ-2 ಮುಂತಾದ ಕನ್ನಡ ಚಿತ್ರಗಳಲ್ಲಿ ಭಾವನಾ ನಟಿಸಿದ್ದಾರೆ,.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top