fbpx
ಸಮಾಚಾರ

ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ವಿರುದ್ಧ ಕೇಸ್ ದಾಖಲು

ಖ್ಯಾತ ನಟ ದುನಿಯಾ ವಿಜಯ್, ಹಾಸ್ಯ ನಟ ಸಾಧು ಕೋಕಿಲ ಮತ್ತು ಹಿರಿಯ ನಟಿ ಮತ್ತು ರಾಜಕಾರಣಿ ಉಮಾಶ್ರೀ ವಿರುದ್ಧ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ, ಜಯಮಾಲಾ ವಿರುದ್ಧ ಕೇಸ್ ದಾಖಲಾಗಿದೆ.

ಮೇಕೆದಾಟು ಯೋಜನೆ ಆರಂಭಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ಕಾರ್ಯಕ್ರಮ ಕೊರೋನಾ ಅಬ್ಬರದ ನಡೆವೆಯೂ ಭರದಿಂದ ಸಾಗುತ್ತಿದೆ. ಕಳೆದ ಭಾನುವಾರ ಆರಂಭಗೊದ ಈ ಪಾದಯಾತ್ರೆ ಸದ್ಯ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾದಯಾತ್ರೆ ನಡೆಸುತ್ತಿದ್ದಾರೆ.

ಕೋವಿಡ್ ಮೂರನೇ ಅಲೆಯ ಹಿನ್ನಲೆ ವಿಧಿಸಿರುವ ಕೋವಿಡ್ ನಿರ್ಬಂಧ ನಿಯಮಗಳನ್ನ ಮೀರಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಒಟ್ಟು 31 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಉಮಾಶ್ರೀ ಅವರನ್ನು ಆರೋಪಿ ನಂಬರ್ 8. ಸಾಧುಕೋಕಿಲ ಎ 27 , ಸಾ.ರಾ.ಗೋವಿಂದು ಎ 28 , ಜಯಮಾಲ ಎ29 , ದುನಿಯಾ ವಿಜಯ್ ಎ30 ಆಗಿದ್ದಾರೆ. ಇದೆ ಪ್ರಕರಣದಲ್ಲಿ ಮೊದಲ ಆರೋಪಿ ಡಿ.ಕೆ.ಶಿವಕುಮಾರ್ ಹಾಗೂ ಎರಡನೇ ಆರೋಪಿ ಸಿದ್ದರಾಮಯ್ಯ ಆಗಿದ್ದಾರೆ.

ಏನಿದು ಪ್ರಕರಣ:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರ ಕೆಲವು ನಿರ್ಬಂಧಗಳನ್ನು ಹೇರಿ ವೀಕೆಂಡ್ ಕರ್ಫ್ಯು ಹಾಕಿತ್ತು. ಈ ನಿಯಾದ ಪ್ರಕಾರ ಶನಿವಾರ ಮತ್ತು ಭಾನುವಾರ ಬಹುತೇಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವರಿಂದ ಪ್ರಮುಖರ ವಿರುದ್ಧ ಪ್ರಕರಣ ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top