fbpx
ಸಮಾಚಾರ

ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್‌ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ದೇಶಾದ್ಯಂತ ಕೊರೋನಾ ಮೂರನೇ ಅಲೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಖ್ಯಾತ ಸಿನಿಮಾ ಮಂದಿ, ರಾಜಕಾರಣಿಗಳು ಸೇರಿದಂತೆ ಕೆಲ ಗಣ್ಯರಿಗೂ ಕೋವಿಡ್ ಕಾಯಿಲೆ ವಕ್ಕರಿಸಿದೆ. ಇದೀಗ ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಕೊರೊನಾ ಜೊತೆ ಇತರ ಆರೋಗ್ಯ ಸಮಸ್ಯೆಗಳಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಗಾನಕೋಗಿಲೆ ಎಂದೇ ಖ್ಯಾತರಾಗಿರುವ ಲತಾ ಮಂಗೇಶ್ಕರ್ ಅವರು 1948 ಮತ್ತು 1974 ರ ನಡುವೆ 25,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಗಿನ್ನೆಸ್ ವರ್ಲ್ಡ್​ ರೆಕಾರ್ಡ್ ಕೂಡ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top