fbpx
ಸಮಾಚಾರ

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢ

ಮೇಕೆದಾಟು ಯೋಜನೆ ಆರಂಭಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ಕಾರ್ಯಕ್ರಮ ಕೊರೋನಾ ಅಬ್ಬರದ ನಡೆವೆಯೂ ಭರದಿಂದ ಸಾಗುತ್ತಿದೆ. ಕಳೆದ ಭಾನುವಾರ ಆರಂಭಗೊದ ಈ ಪಾದಯಾತ್ರೆ ಸದ್ಯ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾದಯಾತ್ರೆ ನಡೆಸುತ್ತಿದ್ದಾರೆ.

 

 

ಪಾದಯಾತ್ರೆ ಆರಂಭಕ್ಕೂ ಮುನ್ನ ಕನಕಪುರದ ಬಳಿಯ ಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಿ ಪಾದಯಾತ್ರೆಗೆ ಚಾಲನೆ ನೀಡಲಾಗಿತ್ತು. ಈ ಸಮಾವೇಶದಲ್ಲಿ ಭಾಗವಹಿಸಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋರೋಣ ಸೋಂಕು ಪತ್ತೆಯಾಗಿರುವುದು ದೃಢವಾಗಿದೆ.

ಕಾಂಗ್ರೆಸ್ ಹಿರಿಯ ನಾಯಕ ಹೆಚ್ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಈ ಇಬ್ಬರೂ ನಾಯಕರು ಕಳೆದ ಭಾನುವಾರ ನಡೆದ ಪಾದಯಾತ್ರೆ ಚಾಲನಾ ಸಮಾವೇಶದಲ್ಲಿ ಭಾಗವಹಿಸಿದ್ದರು. ಈಗ ಇವರಿಗೆ ಕೋರೋಣ ಸೋಂಕು ತಗುಲಿರುವುದು ಪಾದಯಾತ್ರೆ ಮಾಡುತ್ತಿರುವ ಇತರ ಮುಖಂಡರುಗಳಿಗೂ ಇದೀಗ ಕೊರೋನಾ ಅಂತಕ ಎದುರಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top