fbpx
ಸಮಾಚಾರ

ಐಪಿಎಸ್ ಅಧಿಕಾರಿ ಡಿ.ರೂಪಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್

ಕರ್ನಾಟಕ ಹೈಕೋರ್ಟ್ ಐಪಿಎಸ್ ಅಧಿಕಾರಿ ಡಿ.ರೂಪ ಅವರಿಗೆ ಬಿಗ್ ರಿಲೀಫ್ ನೀಡಿದೆ. ನಿವೃತ್ತ ಡಿಜಿಪಿ ಎಚ್​.ಎನ್​.ಸತ್ಯನಾರಾಯಣ್​ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವ ಮೂಲಕ ಡಿ.ರೂಪ ಅವರಿಗೆ ರಿಲೀಫ್ ನೀಡಿದೆ.

ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣ ನ್ಯಾಯಾ
ಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಏನಿದು ಪ್ರಕರಣ..?
೨೦೧೭ರಲ್ಲಿ ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಎಚ್‌. ಎನ್‌. ಸತ್ಯನಾರಾಯಣ ರಾವ್‌ ವಿರುದ್ಧ ಡಿ.ರೂಪ ಭ್ರಷ್ಟಾಚಾರ ಆರೋಪ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿದ್ದ ಎಐಎಡಿಎಂಕೆ ನಾಯಕಿ ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣ ರಾವ್‌ ಎರಡು ಕೋಟಿ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿತ್ತು.

“ಡಿ. ರೂಪಾ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ’ ಎಂದು ಆರೋಪಿಸಿ 20 ಕೋಟಿ ರೂ. ಮೊತ್ತಕ್ಕೆ ಎಚ್‌. ಎನ್‌. ಸತ್ಯನಾರಾಯಣ ರಾವ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top